×
Ad

ಕೊಪ್ಪಳ| ಕಿರ್ಲೋಸ್ಕರ್‌ನಿಂದ ಕನ್ನಡ ರಾಜ್ಯೋತ್ಸವ ಆಚರಣೆ

Update: 2025-11-28 18:38 IST

ಕೊಪ್ಪಳ: ಕಿರ್ಲೋಸ್ಕರ್ ಕಾರ್ಖಾನೆಯಿಂದ ವಿವಿಧ ಸಾಧಕರಿಗೆ ಸನ್ಮಾನಿಸುವ ಮೂಲಕ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಕಂಪೆನಿಯ ಹಾಲ್‌ನಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರೋಪ ಸಮಾರಂಭದಲ್ಲಿ ಶರಣಪ್ಪಜಿರ್ ಹೂಗಾರರವರಿಂದ ಕನ್ನಡದ ಪ್ರಾಮುಖ್ಯತೆ ಮತ್ತು ಕನ್ನಡದ ಅನುಷ್ಠಾನದ ಬಗ್ಗೆ ಉಪನ್ಯಾಸ ನೀಡಲಾಯಿತು.

ಪದ್ಮಶ್ರೀ ಪುರಸ್ಕೃತ ಶ್ರೀಮತಿ ಬೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ ಅನೇಕ ದೇಶಗಳಲ್ಲಿ ತೊಗಲುಗೊಂಬೆ ಆಟವನ್ನು ಪ್ರದರ್ಶನ ಮಾಡಿ ನಮ್ಮ ದೇಶದಲ್ಲಿ ಅಳಿದು ಹೋಗುತ್ತಿರುವ ಪ್ರಾಚೀನ ಕಲೆ, ಸಂಸ್ಕೃತಿ, ಪರಂಪರೆಯನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡ ಹೋಗಿದ್ದರಿಂದ ಅವರನ್ನು ಸನ್ಮಾನಿಸಿ ಜೊತೆಗೆ ತೊಗಲುಗೊಂಬೆಗಳ ಉನ್ನತಿಕರಣಕ್ಕೆ ಕಂಪೆನಿಯಿಂದ ಧನಸಹಾಯ ನೀಡಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೀಡು ಕಬ್ಬಿಣ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಎಂ.ಜಿ ನಾಗರಾಜ್‌ ವಹಿಸಿದ್ದರು. ಅತಿಥಿಗಳಾಗಿ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾದ ಡಾ. ಪಿ ನಾರಾಯಣ ಮತ್ತು ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ಉಪಾಧ್ಯಕ್ಷರಾದ ಶರಣಪ್ಪ.ಬಿ ಆಗಮಿಸಿದ್ದರು.

ಪ್ರಾಸ್ತಾವಿಕ ಭಾಷಣವನ್ನುಡಾ. ಪಿ. ನಾರಾಯಣರವರು ಮಾಡಿದರು. ಎಮ್.ಎಮ್ ನಾಡಿಗೇರ್ ನಿರೂಪಿಸಿದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News