ಕೊಪ್ಪಳ| ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಾಮನಗೌಡ ಬುನ್ನಟ್ಟಿ ನಿಧನ
Update: 2025-12-25 11:52 IST
ಕನಕಗಿರಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಪಂಗಡ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕಿನ ಬುನ್ನಟ್ಟಿ ಗ್ರಾಮದ ಮುಖಂಡ ರಾಮನಗೌಡ ನಾಯಕ ಬುನ್ನಟ್ಟಿ (48) ಗುರುವಾರ ನಿಧನರಾದರು.
ರಾಮನಗೌಡ ನಾಯಕ ಅವರು ನವಲಿ ಕೃಷಿ ಪ್ರಾಥಮಿಕ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 2008ರಲ್ಲಿ ಈ ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾದಾಗ ನಡೆದ ಮೊದಲ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾಲಿ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಗುರುತಿಸಿಕೊಂಡು ಪ್ರಚಾರ ಮಾಡಿದರು.
ಸ್ವ ಗ್ರಾಮ ಬುನ್ನಟ್ಟಿಯಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.