Koppal | ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗೆ ಮೈಸೂರು ಜಿಲ್ಲಾಡಳಿತದಿಂದ ಆಹ್ವಾನ
ಕೊಪ್ಪಳ: ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ ಹಿನ್ನೆಲೆಯಲ್ಲಿ, ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರ ನೇತೃತ್ವದ ಸ್ವಾಗತ ಸಮಿತಿಯು ಮೈಸೂರು ಜಿಲ್ಲಾಡಳಿತದ ಪರವಾಗಿ ಸ್ವಾಮೀಜಿಗೆ ಆಹ್ವಾನ ಪತ್ರಿಕೆ ನೀಡಿ ದಸರಾ ಉದ್ಘಾಟನೆಗೆ ಕೋರಿತು.
ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ ನೇಗಿ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.