×
Ad

ಕೊಪ್ಪಳ | ರಾಷ್ಟ್ರೀಯ ಲೋಕ ಅದಾಲತ್ : ಮತ್ತೆ ಒಂದಾದ 10 ಜೋಡಿಗಳು

Update: 2025-12-13 23:30 IST

ಕೊಪ್ಪಳ, ಡಿ.13: ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮನಸ್ತಾಪ ಮರೆತು ಜಿಲ್ಲೆಯ 10 ಜೋಡಿಗಳು ಮತ್ತೆ ಒಂದಾಗಿದ್ದಾರೆ. ಜಿಲ್ಲೆಯ ಎಲ್ಲ ತಾಲೂಕು ನ್ಯಾಯಾಲಯಗಳಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 87,918 ಪ್ರಕರಣಗಳ ಪೈಕಿ 79,355 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ವಿಚ್ಛೇದನಕ್ಕೆ ಅರ್ಜಿಸಲ್ಲಿಸಿ 10 ವರ್ಷ ದೂರವಿದ್ದ ಒಂದು ಜೋಡಿಯನ್ನು ಸಹ ಒಂದು ಮಾಡಲಾಗಿದೆ.

ಕೊಪ್ಪಳ, ಗಂಗಾವತಿ, ಕುಷ್ಟಗಿ ಹಾಗೂ ಯಲಬುರ್ಗಾ ನ್ಯಾಯಾಲಯಗಳಲ್ಲಿನ ವಿಮೆ, ನೀರಿನ ಬಿಲ್, ಬ್ಯಾಂಕ್ ಸಾಲ, ಮನೆ ಕರ, ಕೌಟುಂಬಿಕ ದೌರ್ಜನ್ಯ, ಜೀವನಾಂಶ, ಚೆಕ್ ಬೌನ್ಸ್ ಪ್ರಕರಣಗಳು, ಜನನ ಮರಣ, ಸಿವಿಲ್ ಕೇಸ್, ಕ್ರಿಮಿನಲ್ ಕೇಸ್, ಮೋಟಾರ್ ವಾಹನ ಅಪಘಾತ, ಎಂಎಂಆರ್ಡಿ ಪ್ರಕರಣಗಳು ಸೇರಿದಂತೆ 6,764 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.

ದಾಖಲೆಯ ಮೌಲ್ಯ :

ವಿಮೆ, ನೀರಿನ ಕರ, ಮೋಟಾರ್ ವಾಹನ ಅಪಘಾತ ಪ್ರಕರಣಗಳು ಮತ್ತು ಪೂರ್ವ ದಾವೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 135,261,312 ಕೋಟಿ ಮೌಲ್ಯ 79,305 ಪ್ರಕರಣಗಳ ಪೈಕಿ 72,591 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

939,878,456 ಕೋಟಿ ಮೌಲ್ಯದ 87,918 ಪ್ರಕರಣಗಳ ಪೈಕಿ 79,355 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಈ ಬಾರಿ ದಾಖಲೆ ಪ್ರಮಾಣದಲ್ಲಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯಾರ್ಥ ಪಡಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News