×
Ad

ಕೊಪ್ಪಳ| ಬಾಲಕಿ ಮೇಲೆ ಅತ್ಯಾಚಾರ: ಆರೋಪಿಯ ಬಂಧನ

Update: 2025-12-23 18:31 IST

ಸಾಂದರ್ಭಿಕ ಚಿತ್ರ | PC : freepik.com

ಕೊಪ್ಪಳ:  ಚಾಕಲೇಟ್ ನೀಡಿ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ಕನಕಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮಲ್ಲಪ್ಪ ತೋಳದ(37) ಬಂಧಿತ ಆರೋಪಿ. ಈತ  8ನೇ ತರಗತಿ ಓದಿತ್ತಿರುವ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಶಾಲೆಗೆ ರಜೆ ಇದ್ದ ಕಾರಣ ಮಗಳಿಗೆ ಅಂಗಡಿಯಲ್ಲಿ ಕೂರಿಸಿ ತಂದೆ ಹೊಲದಲ್ಲಿ ಕೆಲಸಕ್ಕೆ ಹೋಗಿದ್ದಾನೆ. ಇದನ್ನು ಗಮನಿಸಿದ ಅರೋಪಿ ಮಲ್ಲಪ್ಪ ಅಂಗಡಿಗೆ ಬಂದು ಬಾಲಕಿಗೆ ಮತ್ತು ಬರಿಸುವ ಚಾಕಲೇಟ್‌ ನೀಡಿದ್ದಾನೆ. ಬಳಿಕ ಬಾಲಕಿಯನ್ನು ದ್ವಿಚಕ್ರ ವಾಹನದಲ್ಲಿ ಕೂರಿಸಿ ಗ್ರಾಮದಿಂದ ದೂರವಿರುವ ಜಮೀನಿನ ಶೆಡ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಮಗಳು ಕಾಣಿಸುತ್ತಿಲ್ಲ ಎಂದು ಪಾಲಕರು ಗ್ರಾಮದಲ್ಲಿ ಹುಡುಕಾಟ ನಡೆಸಿದ್ದಾರೆ. ಆದರೆ, ಬಾಲಕಿ ಪತ್ತೆಯಾಗಿರಲಿಲ್ಲ. ಕೆಲ ಸಮಯದ ನಂತರ ಅಳುತ್ತಾ ಮನೆಗೆ ಬಂದ ಬಾಲಕಿ ನಡೆದ ಘಟನೆ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ.  

ಈ ಕುರಿತು ಸಂತ್ರಸ್ತೆಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News