×
Ad

ಕೊಪ್ಪಳ| ಸಾಹಿತ್ಯ ಗೊಂಡಬಾಳಗೆ ರಾಜ್ಯ ಬಾಲಗೌರವ ಪ್ರಶಸ್ತಿ ಪ್ರದಾನ

Update: 2025-12-17 20:06 IST

ಕೊಪ್ಪಳ: ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳರವರಿಗೆ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿಯ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬೆಳಗಾವಿಯ ಸುವರ್ಣಸೌಧದ ಆಡಿಟೋರಿಯಂ ಹಾಲ್‌ನಲ್ಲಿ ನಡೆದ ಭವ್ಯ ಸಮಾರಂಭದಲ್ಲಿ 2023-24ನೇ ಸಾಲಿನ ಬಹುಮುಖ ಪ್ರತಿಭೆ ವಿಭಾಗದಲ್ಲಿ ಸಮಾಜ ಸೇವಕರಾದ ಮಂಜುನಾಥ ಜಿ.ಗೊಂಡಬಾಳ ಮತ್ತು ಜ್ಯೋತಿ ಎಂ. ಗೊಂಡಬಾಳ ದಂಪತಿಯ ಪುತ್ರಿ ಕು.ಸಾಹಿತ್ಯ ಎಂ. ಗೊಂಡಬಾಳರವರಿಗೆ ಸಂಗೀತ, ವೆಸ್ಟರ್ನ್ ನೃತ್ಯ, ಭರತನಾಟ್ಯ ಸೇರಿದಂತೆ ಗಿಟಾರ್ ವಾದನ, ಕೀಬೋರ್ಡ್‌, ಹಾರ್ಮೋನಿಯಂ ನುಡಿಸುವುದು ಮತ್ತು ಮೌಥ್ ಪಿಯಾನೋದಲ್ಲಿ ಪರಿಣತಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.  

ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶಶ್‌ ಬಬಲೇಶ್ವರ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಚೇತನ್ ಕುಮಾರ್, ಬಾಲವಿಕಾಸ ಅಕಾಡಮಿ ಯೋಜನಾಧಿಕಾರಿ ಅಕ್ಕಮಹಾದೇವಿ ಕೆ. ಹೆಚ್, ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮೀ ಗಜಪತಿ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News