×
Ad

ಕೊಪ್ಪಳ | ಪದವಿ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವಂತೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

Update: 2025-10-13 19:37 IST

ಕೊಪ್ಪಳ: ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿಗಳನ್ನು ನೀಡುವಂತೆ ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಶಿವುಕುಮಾರ್, ರಾಜ್ಯದಲ್ಲಿರುವ ವಿಶ್ವವಿದ್ಯಾಲಯಗಳಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ, ಒಳಗೊಂಡಂತೆ ಹಲವಾರು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳು ಕಾಲೇಜು ಶುಲ್ಕದೊಂದಿಗೆ ಅಂಕಪಟ್ಟಿ ಶುಲ್ಕವನ್ನು ಕಟ್ಟಿ ಪರೀಕ್ಷೆ ಬರೆದು ಪಾಸ್ ಆಗಿದ್ದರೂ, ಹಲವಾರು ವರ್ಷಗಳಿಂದ ಮೂಲ ಅಂಕಪಟ್ಟಿಗಳನ್ನು ನೀಡದೇ ವಿಶ್ವವಿದ್ಯಾಲಯ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುತ್ತಿದೆ ಇದನ್ನು ಕೂಡಲೆ ನಿಲ್ಲಿಸಿ ವಿಧ್ಯಾರ್ಥಿಗಳಿಗೆ ಮೂಲ ಅಂಕ ಪಟ್ಟಿಯನ್ನು ನೀಡಬೇಕೆಂದು ಎಸ್‌ಎಫ್‌ಐ ಜಿಲ್ಲಾಅಧ್ಯಕ್ಷ ಶಿವಕುಮಾರ್ ಆಗ್ರಹಿಸಿದರು.

ಪ್ರತ್ಯೇಕವಾಗಿ ಅಂಕಪಟ್ಟಿ ಶುಲ್ಕ ಕಟ್ಟಿದ್ದರು ಕೂಡ ಆನ್‌ಲೈನ್‌ನಲ್ಲಿ ಡಿಜಿಟಲ್ ಮಾರ್ಕ್ಸ್ ಕಾರ್ಡ್ ಮಾತ್ರ ಕೊಡುತ್ತಾರೆ. ಆದರೆ ಅದು ಸರ್ಕಾರಿ ಉದ್ಯೋಗ, ಉನ್ನತ ವಿದ್ಯಾಭ್ಯಾಸ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾನ್ಯವಾಗುವುದಿಲ್ಲ. ಇದರ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ಅವರು ಉದ್ಯೋಗ ಅಥವಾ ಮುಂದಿನ ಓದಿಗೆ ಅರ್ಜಿ ಹಾಕಲು ಸಾಧ್ಯವಾಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶರೀಫ್ ಎಂ, ನಾಗರಾಜ್. ಯು, ಜಂಟಿ ಕಾರ್ಯದರ್ಶಿಗಳಾದ ಬಸಯ್ಯ, ಮುಖಂಡರಾದ ಮಂಜುನಾಥ್ ಚಳ್ಳಾರಿ, ಯಮನೂರ ಸಿ, ದೊಡ್ಡಬಸವ, ಹುಲಿಗೆಮ್ಮ ಇಂದರಾಗಿ, ಪೂಜಾ, ಅಮೃತ, ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News