ಸಾಂದರ್ಭಿಕ ಚಿತ್ರ

ಕೊಪ್ಪಳ: ಮನೆಯಲ್ಲಿ ನೃತ್ಯ ಮಾಡದಂತೆ ತಂದೆ-ತಾಯಿ ತಡೆದಿದ್ದಕ್ಕೆ ಮನನೊಂದು 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಗ್ರಾಮದ ಲಕ್ಷ್ಮಣ ಚಲವಾದಿ ಅವರ ಪುತ್ರಿ ಜಯಶ್ರೀ (16) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 22ರಂದು ಮನೆಯಲ್ಲಿ ನೃತ್ಯ ಮಾಡಬಾರದು ಎಂದು ತಂದೆ-ತಾಯಿ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು, ಮನೆಯ ಹಾಲ್‌ನಲ್ಲಿದ್ದ ಶೀಟ್‌ಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ 

ಮನೆಯಲ್ಲಿ ನೃತ್ಯ ಮಾಡುವುದು ಬೇಡ ಎಂದು ತಂದೆ-ತಾಯಿ ಹೇಳಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಸೆ.22ರಂದು ಮನೆಯ ಹಾಲ್‍ನಲ್ಲಿದ್ದ ಶೀಟಿಗೆ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಜಯಶ್ರೀಯನ್ನು ಹಿಟ್ನಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.

ಈ ಕುರಿತು ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor