ಕೊಪ್ಪಳ: ಹಾಸ್ಟೆಲ್ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳಿಂದ ಪ್ರತಿಭಟನೆ
Update: 2025-12-03 22:25 IST
ಕೊಪ್ಪಳ: ಹಾಸ್ಟಲ್ ನಲ್ಲಿರುವ ಅವ್ಯವಸ್ಥೆ ವಿರುದ್ಧ ವಿದ್ಯಾರ್ಥಿಗಳು ಜಿಲ್ಲಾಧಿಕಾರಗಳ ಕಚೇರಿ ಎದುರು ಧಿಡೀರ್ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಸ್ಪತ್ರೆ ಹಿಂದುಗಡೆ ಇರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಸತಿ ನಿಲಯದ ವಿದ್ಯಾರ್ಥಿಗಳು ವಸತಿ ನಿಲಯಲಯದಲ್ಲಿ ಇರುವ ಕುಡಿಯುವ ನೀರಿನ ಸಮಸ್ಯೆ, ಊಟದ ಸಮಸ್ಯೆ, ಸೇರಿದಂತೆ ಮೂಲಭೂತ ಸಮಸ್ಯೆಗಳನ್ನು ಬಗೆ ಹರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಸ್ಥಳಕ್ಕೆ ಅಪಾರ ಜಿಲ್ಲಾಧಿಕಾರಿ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಕೈಬಿಟ್ಟರು.
ಈ ಸಂದರ್ಭದಲ್ಲಿ ಶಿವಮೂರ್ತಿ, ಶರಣು ಪಾಟೀಲ್, ಹೊನ್ನೂರು, ಖಾಸಿಂ, ಹನುಮೇಶ, ಕಲ್ಲೇಶ್, ರಾಕೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.