ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಕ್ಯಾದಿಗುಪ್ಪ ಬಳಿ ಶನಿವಾರ ನಡು ರಸ್ತೆಯಲ್ಲೇ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಲಾರಿಗೆ ಬೆಂಕಿ ತಗುಲಿರಬಹುದು ಎಂದು ತಿಳಿದುಬಂದಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಲಾರಿಯಿಂದ ಹೊರಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಲಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ರಸ್ತೆಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.

ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ