ಕೊಪ್ಪಳ| ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
Update: 2026-05-19 18:16 IST
ಕುಕನೂರು: ಕೊಪ್ಪಳ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದ ಸಮೀಪದ ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಮೃತರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ.
ಬಾಲಕಿಯರು ಯರೇಹಂಚಿನಾಳ ಗ್ರಾಮದಿಂದ ಗದಿಗೆ ಹೋಗುವ ರಸ್ತೆ ಪಕ್ಕದಲ್ಲಿರುವ ಕೃಷಿ ಹೊಂಡಕ್ಕೆ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ಘಟನೆಯಿಂದ ಮೃತ ಮಕ್ಕಳ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.