×
Ad

ಕೊಪ್ಪಳ | ಬಲ್ಡೋಟಾ ಕಾರ್ಖಾನೆಯಲ್ಲಿ ಕೆಲಸದ ವೇಳೆ ಆಯತಪ್ಪಿ ಬಿದ್ದು ಕಾರ್ಮಿಕ ಮೃತ್ಯು

Update: 2025-11-10 23:15 IST

ಕೊಪ್ಪಳ: ಬಲ್ಡೋಟ ಕಾರ್ಖಾನೆಯಲ್ಲಿ ಕೆಲಸದ ವೇಳೆ ಕಾರ್ಮಿಕನೊರ್ವ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ.  

ಕಿನ್ನಾಳ ಗ್ರಾಮದ ವೀರಭದ್ರಪ್ಪ ಕುಂಬಾರ(40) ಮೃತ ಕಾರ್ಮಿಕ ಎಂದು ಗುರುತಿಸಲಾಗಿದೆ. ವೀರಭದ್ರಪ್ಪ ಕುಂಬಾರ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಮೇಲಿನಿಂದ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ವೀರಭದ್ರಪ್ಪ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮದ್ಯದಲ್ಲೇ ಮೃತಪಟ್ಟಿದ್ದಾರೆ.  

ಸ್ಥಳಕ್ಕೆ ಕೊಪ್ಪಳ ಗ್ರಾಮೀಣ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News