×
Ad

ಕೊಪ್ಪಳ: ಕುಡಿಯುವ ನೀರಿನಲ್ಲಿ ಹುಳುಗಳು; ಕಲಕೇರಿ ಗ್ರಾಮಸ್ಥರಲ್ಲಿ ಆತಂಕ

Update: 2026-01-29 09:59 IST

ಕೊಪ್ಪಳ/ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಲಕೇರಿ ಗ್ರಾಮದಲ್ಲಿ ಸಾರ್ವಜನಿಕರು ನಳದಿಂದ ನೀರು ತುಂಬುವ ವೇಳೆ ನೀರಿನೊಂದಿಗೆ ಹುಳುಗಳು ಬರುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳುಗಳು ಕಾಣಿಸಿಕೊಳ್ಳುತ್ತಿದ್ದು, ಈ ನೀರನ್ನು ಸೇವಿಸಿದರೆ ಜನರಿಗೆ ರೋಗಗಳು ಹರಡುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ನೀರು ಸರಬರಾಜು ಮಾಡುವ ಟ್ಯಾಂಕ್‌ಗಳನ್ನು ಸರಿಯಾಗಿ ಸ್ವಚ್ಛಗೊಳಿಸದಿರುವುದೇ ನೀರಿನಲ್ಲಿ ಹುಳುಗಳು ಕಾಣಿಸಿಕೊಳ್ಳಲು ಪ್ರಮುಖ ಕಾರಣವೆಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಈ ಸಮಸ್ಯೆಯಿಂದ ಜೀವಕ್ಕೆ ಯಾವುದೇ ಅಪಾಯ ಉಂಟಾದರೆ ಗ್ರಾಮ ಪಂಚಾಯಿತಿಯೇ ಸಂಪೂರ್ಣ ಹೊಣೆಗಾರಿಕೆ ವಹಿಸಬೇಕೆಂದು ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News