Koppala | ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಕಾರು ಜಖಂ
Update: 2026-08-07 14:59 IST
ಕನಕಗಿರಿ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡು ಜೋಡಿ ವಿದ್ಯುತ್ ಕಂಬಗಳು ಮುರಿದು ಬಿದ್ದ ಘಟನೆ ಪಟ್ಟಣದ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದ ಕನಕಗಿರಿ ಕೊಪ್ಪಳ ರಸ್ತೆಯಲ್ಲಿ ನಡೆದಿದೆ.
ಓರ್ವ ವಾಹನ ಚಾಲಕ ಎಮಿಗನೂರು ಗ್ರಾಮದ ಬಾಷಾ ಮಾಬುಸಾಬ ಎಂಬವರು ಚಲಾಯಿಸುತ್ತಿದ್ದ ಕಾರು ಮುಸಲಾಪುರ ಗ್ರಾಮದಿಂದ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಗಾಯಾಳುವನ್ನು ಸ್ಥಳೀಯರು ಕೂಡಲೇ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಘಟನಾ ಸ್ಥಳಕ್ಕೆ ಜೆಸ್ಕಾಂ ಇಲಾಖೆಯ ಜೆಇ ಸಿದ್ದಲಿಂಗಯ್ಯ, ಸಿಬ್ಬಂದಿ ಆನಂದ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಲ್ಲಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕೆಲವು ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯವಾಗಿತ್ತು.