ಕೊಪ್ಪಳ | ಚಿರತೆ ದಾಳಿಗೆ 13 ಕುರಿಗಳು ಬಲಿ
Update: 2025-07-17 18:02 IST
ಕೊಪ್ಪಳ/ಕುಕನೂರು: ಚಿರತೆ ದಾಳಿಗೆ 13 ಕುರಿಗಳು ಬಲಿಯಾಗಿರುವ ಘಟನೆ ತಾಲೂಕಿನ ನೇಲಜೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ದೇವಪ್ಪ ಬೇವಿನಗಿಡದ ಅವರಿಗೆ ಸೇರಿದ 13 ಕುರಿಗಳು ಚಿರತೆ ದಾಳಿಗೆ ಬಲಿಯಾಗಿದ್ದು ಕೊಟ್ಟಿಗೆಯಲ್ಲಿ ಕುರಿಗಳನ್ನು ಕೂಡಿ ಹಾಕಿದ್ದರು. ಈ ವೇಳೆ ಚಿರತೆ ದಾಳಿ ನಡೆಸಿ, ಕೊಂದುಹಾಕಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಚಿರತೆಯ ಸೆರೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಮತ್ತು ಸರ್ಕಾರದಿಂದ ಪರಿಹಾರ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ರೈತರು ತಮ್ಮ ಹಸು, ಕರು, ಎಮ್ಮೆ ಮೇಕೆ, ಕುರಿಗಳನ್ನು ಮೇಯಿಸಲು ಭಯಪಡುವ ಸ್ಥಿತಿ ಇದೆ. ಚಿರತೆ ದಾಳಿಯಿಂದ ಈಗಾಗಲೇ ಸಾಕು ಪ್ರಾಣಿಗಳನ್ನು ಕಳೆದುಕೊಂಡಿದ್ದೇವೆ. ಚಿರತೆ ಹಾವಳಿ ತಪ್ಪಿಸಲು ಶಾಶ್ವತ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮಸ್ಥರು ಆಗ್ರಹಿಸಿದರು.