×
Ad

ಕೊಪ್ಪಳ | ಕೇಂದ್ರ ಸರಕಾರದ ಹಿಂದಿ ಸಭೆಯನ್ನು ವಿರೋಧಿಸಿ ಹೋರಾಟ ನಡೆಸಿದ ಬಂಧಿತ ಕಾರ್ಯಕರ್ತರ ಬಿಡುಗಡೆಗೆ ಆಗ್ರಹಿಸಿ ಕರವೇಯಿಂದ ಪ್ರತಿಭಟನೆ

Update: 2025-09-27 18:35 IST

ಕೊಪ್ಪಳ : ಕೇಂದ್ರ ಸರ್ಕಾರದ ಹಿಂದಿ ಸಭೆಯನ್ನು ವಿರೋಧಿಸಿ ಹೋರಾಟ ನಡೆಸಿದ 41 ಕರವೇ ಕಾರ್ಯಕರ್ತರನ್ನು ಬಂಧಿಸಿರುವುದು ಖಂಡನೀಯ ಕ್ರಮ ಎಂದು ಕರವೇ ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಕೊಪ್ಪಳ ಜಿಲ್ಲಾ ಘಟಕದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, “ಭಾರತವು ಒಕ್ಕೂಟ ರಾಷ್ಟ್ರವಾಗಿದ್ದು, ಬಹುಭಾಷಾ-ಬಹುಸಂಸ್ಕೃತಿಯ ದೇಶವಾಗಿದೆ. ಆದರೆ ಹಿಂದಿಯನ್ನು ವೈಭವೀಕರಿಸಿ ಬಲವಂತವಾಗಿ ಹೇರುವ ಪ್ರಯತ್ನವನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ. ನಮ್ಮ ನೆಲದಲ್ಲಿ ಮೊದಲು ಕನ್ನಡವೇ ಪ್ರಾಮುಖ್ಯ. ಹಿಂದಿ ದಿವಸ್ ಆಚರಣೆ ಅಸಮರ್ಪಕ ಮತ್ತು ಅನಗತ್ಯ ಎಂದರು.

ರಾಜಭಾಷಾ ಸಂಸತ್ ಸಮಿತಿಯ ಉಪಸಮಿತಿ ಸಭೆಗಳು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳ ಹಿತಕ್ಕೆ ವಿರುದ್ಧವಾಗಿ ನಡೆಯುತ್ತಿವೆ ಎಂದು ಆರೋಪಿಸಿದರು.

ಬೆಂಗಳೂರಿನಲ್ಲಿ ಬಂಧನಕ್ಕೊಳಗಾದ 41 ಕರವೇ ಕಾರ್ಯಕರ್ತರನ್ನು ತಕ್ಷಣವೇ ಬೇಷರತ್ತಾಗಿ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ, ಕೊಪ್ಪಳದ ಶ್ರೀ ಕನಕದಾಸ ವೃತ್ತದಲ್ಲಿ ಭೂತ ದಹನ, ಧರಣಿ ಮತ್ತು ಘೋಷಣಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಭುವನೇಶ್ವರಿ ಮೊಟಗಿ, ಜಿಲ್ಲಾ ಉಪಾಧ್ಯಕ್ಷ ಸುರೇಶ ಪಾಟೀಲ, ಜಿಲ್ಲಾ ಸಂಚಾಲಕ ಸಂಗಮೇಶ ಗುರಿಕಾರ, ಕುಷ್ಟಗಿ ಅಧ್ಯಕ್ಷ ಪ್ರಕಾಶ ಮನ್ನೆರಾಳ, ಕುಕನೂರು ಅಧ್ಯಕ್ಷ ರಮೇಶ ಚಂಡೂರು, ಗೌರವಾಧ್ಯಕ್ಷ ಆದಪ್ಪ ಉಳಾಗಡ್ಡಿ, ನಗರಾಧ್ಯಕ್ಷ ಪ್ರಪುಲ ಪಾಟೀಲ, ಭಾಗ್ಯನಗರ ಅಧ್ಯಕ್ಷ ವಿರೇಶ ಮುಂಡಾಸದ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News