Koppala | ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ ಗಾಂಧಿ-ರಾಹುಲ್ ಗಾಂಧಿಗೆ ಕಿರುಕುಳ ಆರೋಪ; ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಚೇರಿ ಮುತ್ತಿಗೆ
ಕೊಪ್ಪಳ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಸಿಲುಕಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಬಿಜೆಪಿ ಕಚೇರಿಯನ್ನು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಕಾರ್ಯಕರ್ತನ್ನು ಪೊಲೀಸರು ತಡೆದು ನಿಲ್ಲಿಸಿದರು. ಇದರಿಂದ ಕಾರ್ಯಕರ್ತರು ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಬಿಜೆಪಿ ಕಚೇರಿ ಮುಚಿತ್ತು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಕಾಂಗ್ರೆಸ್ ವಕ್ತಾರೆ ಶೈಲಾಜಾ ಹಿರೇಮಠ್, ಮಂಜುನಾಥ್ ಗೊಂಡಬಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಮೀದ್ ಮನಿಯಾರ್, ಅಕ್ಬರ್ ಪಲ್ಟನ್, ಮಲ್ಲು ಪೂಜಾರ್, ಮುತ್ತುರಾಜ್ ಕುಷ್ಟಗಿ, ಗಾಳೆಪ್ಪ ಪೂಜಾರ್, ಪ್ರಸನ್ನ ಗಡಾದ್, ಕಿಶೋರಿ ಬುದುನೂರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.