ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಗವಿಸಿದ್ದೇಶ್ವರ ಶ್ರೀಗಳು ಎಂದು ಸುಳ್ಳು ಸುದ್ದಿ ಹರಡಿದ ಆರೋಪ: ಪ್ರಕರಣ ದಾಖಲು
ಕೊಪ್ಪಳ : ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳನ್ನೂ ಆಯ್ಕೆ ಮಾಡಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ಗವಿಸಿದ್ದೇಶ್ವರ ಶ್ರೀಗಳು ಈ ಅಹ್ವಾನವನ್ನು ತಿರಸ್ಕರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.