ಕೊಪ್ಪಳ| ಬೈಕ್‌ಗೆ ಬೊಲೆರೋ ಢಿಕ್ಕಿ: ಮೂವರು ಯುವಕರು ಮೃತ್ಯು
Update: 2025-12-17 23:33 IST
ಕೊಪ್ಪಳ: ಬೈಕ್‌ಗೆ ಬೊಲೆರೋ ವಾಹನ ಢಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾಹುಸೇನ್(18), ಆಸೀಫ್(16) ಮತ್ತು ವಾಜಿದ್(19) ಮೃತರು. ಈ ಮೂವರು ಶ್ರೀರಾಮನಗರದಿಂದ ಹೊಸಹಳ್ಳಿಗೆ ಬೈಕ್‌ನಲ್ಲಿ ಹೋಗುವಾಗ ಇಂದರಗಿ ಗ್ರಾಮದ ಸಮೀಪ ಬೊಲೆರೋ ವಾಹನ ಢಿಕ್ಕಿಯಾಗಿದೆ. ಅಪಘಾತದ ಬಳಿಕ ಬೊಲೆರೋ ಬಿಟ್ಟು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.