ಕೊಪ್ಪಳ | ಆಟೋ ಪಲ್ಟಿ : ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು
Update: 2025-11-07 12:23 IST
ಪ್ರೇಮಾ
ಗಂಗಾವತಿ : ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿಯೊರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹೊರವಲಯದಲ್ಲಿ ಗುರುವಾರ ನಡೆದಿದೆ.
ಅಪಘಾತದಲ್ಲಿ ಬಸಾಪಟ್ಟಣ ಗ್ರಾಮದ ಪ್ರೇಮಾ (18) ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಬಸಾಪಟ್ಟಣ ಗ್ರಾಮದ ವಡ್ಡರಹಟ್ಟಿ ಮಾರ್ಗವಾಗಿ ಗಂಗಾವತಿ ಕಡೆಗೆ ಬರುವ ಸಮಯದಲ್ಲಿ ಆಟೋ ಚಾಲಕನ ನಿಯಂತ್ರಣ ತಪ್ಪಿ, ಆಟೋ ಪಲ್ಟಿಯಾಗಿದೆ. ಘಟನೆಯಿಂದ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.