×
Ad

ಕೊಪ್ಪಳ | ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಪಷ್ಟೀಕರಣ

Update: 2025-10-23 18:39 IST

ಕೊಪ್ಪಳ : ಕೊಪ್ಪಳ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಲ್ಲಾ 10 ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರೆಡ್ಡಿ ಅವರು ಮುಖ್ಯಮಂತ್ರಿಗಳ ಪತ್ರ ಬರೆದ ಕುರಿತು ವಿವಿಧ ಮಾಧ್ಯಮಗಳು ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಪ್ರಕಟಗೊಂಡ ವಿಷಯಕ್ಕೆ ಪೂರಕವಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವರ್ಗಗದಿಂದ ಬಂದಿದೆ ಎನ್ನಲಾದ ಸಹಿ ಇಲ್ಲದ ಅನಾಮಧೇಯ ಪತ್ರದ ಕುರಿತಂತೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಕವಲೂರ ಅವರು ಸ್ಪಷ್ಟೀಕರಣ ನೀಡಿದ್ದಾರೆ.

ಅ.18 ರಂದು ಶಾಸಕ ಬಸವರಾಜ ರಾಯರೆಡ್ಡಿ ಅವರು ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿಯ ಎಲ್ಲಾ 10 ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಬಗ್ಗೆ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಬಿತ್ತರಗೊಂಡಿದ್ದು, ಅದಕ್ಕೆ ವಿಮುಖವಾಗಿ ಇಲಾಖೆಯ ಅಧಿಕಾರಿ ವರ್ಗದಿಂದ ಬಂದಿದೆ ಎಂಬಲಾದ ಹಾಗೂ ಸಹಿ ಇಲ್ಲದ ಅನಾಮಧೇಯ ಮನವಿ ಪತ್ರದಲ್ಲಿ 20 ಅಂಶಗಳ ಕುರಿತು ಪ್ರಶ್ನೆಗಳನ್ನು ನಮೂದಿಸಿದ್ದು, ಈ ಬಗ್ಗೆಯೂ ವಿವಿಧ ಸುದ್ದಿ ಮಾಧ್ಯಮಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡಿತ್ತು.

ಆದರೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಬಂದಿದೆ ಎನ್ನಲಾದ ಹಾಗೂ ಸಹಿ ಇಲ್ಲದ ಅನಾಮಧೇಯ ಮನವಿ ಪತ್ರಕ್ಕೂ ಇಲಾಖೆಗೂ ಯಾವುದೇ ಸಂಬಂಧವಿಲ್ಲ ಮತ್ತು ಈ ವಿಷಯವನ್ನು ಜಿಲ್ಲಾ ಕಚೇರಿಯಿಂದ ಹೊರಡಿಸಿರುವುದಿಲ್ಲ ಎಂದು ಇಲಾಖೆಯ ಹಿರಿಯ ಭೂ ವಿಜ್ಞಾನಿ ಪ್ರಕಟಣೆ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

ಈ ಹಿಂದೆ ಶಾಸಕ ಬಸವರಾಜ ರಾಯರಡ್ಡಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೆಲ ಅಧಿಕಾರಿಗಳು 12-13 ವರ್ಷಗಳಿಂದ ಕೊಪ್ಪಳ ಜಿಲ್ಲೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಇವರಿಂದ ಸರ್ಕಾರದ ಪ್ರತಿಷ್ಠೆಗೆ ಧಕ್ಕೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ 10ಕ್ಕೂ ಹೆಚ್ಚು ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಾಗೂ ಅವರನ್ನು ತಕ್ಷಣ ವರ್ಗಾವಣೆ ಮಾಡಬೇಕು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಿ ಕ್ರಮ ಕೈಗೊಳ್ಳಬೇಕು. ಕಾನೂನು ಅರಿವು ಇಲ್ಲದೇ ಕೆಳ ಹಂತದ ಅಧಿಕಾರಿಗಳ ಮಾತಿನಂತೆ ಅಕ್ರಮ ದಂಧೆಗೆ ಸಹಕರಿಸುತ್ತಿರುವ ಹಿರಿಯ ಭೂ ವಿಜ್ಞಾನಿ ಪುಷ್ಪಲತಾ ಸೇರಿ ಇತರ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News