ಕನಕಗಿರಿ: ಅಕ್ರಮ SIR ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯನ್ನು ದಮನಿಸಿ ಸಿಪಿಐ(ಎಂ) ನಾಯಕರನ್ನು ಬಂಧಿಸಿರುವ ಕೇಂದ್ರ ಗೃಹ ಇಲಾಖೆಯ ಕ್ರಮವನ್ನು ಖಂಡಿಸಿ ಪಟ್ಟಣದಲ್ಲಿ  CPIM, DYFI, SFI, CITU ಸಂಘಟನೆಗಳಿಂದ ಪಂಜಿನ ಮೆರವಣಿಗೆ ನಡೆಯಿತು. 

ದಿಲ್ಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕೇರಳ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಪ್ರಧಾನ ಕಾರ್ಯದರ್ಶಿ ಎಂ.ಎ. ಬೇಬಿ, ಬೃಂದಾ ಕಾರಟ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನು ತಡೆಯಲು ರೈಲು, ಮೆಟ್ರೋ ಸೇವೆ ಸ್ಥಗಿತಗೊಳಿಸಿ, ಇಂಟರ್ನೆಟ್ ನಿರ್ಬಂಧಿಸಿ, ಬ್ಯಾರಿಕೇಡ್ ಹಾಕಿರುವುದು ಅಘೋಷಿತ ತುರ್ತು ಪರಿಸ್ಥಿತಿ ಹೇರಿದಂತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿ ಸಂಘಟನೆಗಳ ಮುಖಂಡರ ಬಂಧನವನ್ನು ಕೂಡ ನಾವು ಖಂಡಿಸುತ್ತೇವೆ ಎಂದು ನಾಯಕರು ಹೇಳಿದರು.

ಈ ಸಂದರ್ಭದಲ್ಲಿ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಬಾಳಪ್ಪ ಹುಲಿಹೈದರ, CITU ತಾಲೂಕು ಸಂಚಾಲಕ ಮಲ್ಲಪ್ಪ ಮ್ಯಾಗಡೆ, DYFI ಜಿಲ್ಲಾ ಸಂಚಾಲಕ ಅಮರೇಶ ಕಡಗದ, SFI ತಾಲೂಕು ಅಧ್ಯಕ್ಷ ಹನುಮೇಶ ಮ್ಯಾಗಡೆ, ಪರಶುರಾಮ, ಮೌಲಾ ಸಾಬ್, ವೆಂಕಟೇಶ ಭಾವಿಕಟ್ಟಿ, ನಬಿಸಾಬ ಹಣಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor