ಕೊಪ್ಪಳ | ಮಾಧ್ಯಮ ಅಕಾಡೆಮಿ ದತ್ತಿ ಪ್ರಶಸ್ತಿಗೆ ಪತ್ರಕರ್ತ ನಾಗರಾಜ್ ವೈ. ಆಯ್ಕೆ
ಕೊಪ್ಪಳ : ಕರ್ನಾಟಕ ಸರ್ಕಾರದ ಕರ್ನಾಟಕ ಮಾಧ್ಯಮ ಅಕಾಡೆಮಿಯ 2025ನೇ ಸಾಲಿನ ವಿವಿಧ ದತ್ತಿನಿಧಿಗಳ ಪ್ರಶಸ್ತಿಗಳ ಪೈಕಿ "ಪ್ರಜಾ ಸಂದೇಶ ದತ್ತಿ ಪ್ರಶಸ್ತಿ" ಗೆ ಟಿವಿ 5 ವಾಹಿನಿ ಕೊಪ್ಪಳ ಜಿಲ್ಲಾವರದಿಗಾರ ನಾಗರಾಜ್ ವೈ. ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಮಾಧ್ಯಮ ಅಕಾಡೆಮಿ ಕಚೇರಿಯಲ್ಲಿ ಗುರುವಾರದಂದು ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಅವರ ಅಧ್ಯಕ್ಷತೆಯಲ್ಲಿ ಸರ್ವಸದಸ್ಯರ ಸಮ್ಮುಖದಲ್ಲಿ ನಡೆದ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿನ ಪ್ರಶಸ್ತಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಜಾ ಸಂದೇಶ ದತ್ತಿ ಪ್ರಶಸ್ತಿಗೆ ನಾಗರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ದೃಶ್ಯ ಹಾಗೂ ಮುದ್ರಣ ಮಾಧ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, "ಕೊಪ್ಪಳ ತಾಲೂಕಿನ ಚಿಲಕಮುಖಿ ಗ್ರಾಮದಲ್ಲಿ ಯುವಕನೊಬ್ಬ ಅನ್ಯಜಾತಿ ಯುವತಿಯನ್ನು ಮದುವೆಯಾಗಿರುವ ಕಾರಣಕ್ಕೆ 8 ವರ್ಷಗಳ ಕಾಲ ಬಹಿಷ್ಕಾರ ಹಾಕಿದ ಘಟನೆ ಬಗ್ಗೆ ಟಿವಿ 5 ವಾಹಿನಿಯಲ್ಲಿ ವಿಶೇಷ ವರದಿ ಮಾಡಿದ್ದರು.
ಈ ಪರಿಣಾಮಕಾರಿ ಮತ್ತು ವಿಶೇಷ ವರದಿಯನ್ನು ಗುರುತಿಸಿ ಸರಕಾರ ಈ ಗೌರವವನ್ನು ನೀಡಿದೆ.