ಕೊಪ್ಪಳ | ಕಿಮ್ಸ್ ಆಡಳಿತಾಧಿಕಾರಿ ಬಿ.ಕಲ್ಲೇಶ ಮನೆ- ಕಚೇರಿ, ಕುಟುಂಬದ ಒಡೆತನದ ಶಾಲೆಯ ಮೇಲೆ ಲೋಕಾಯುಕ್ತ ದಾಳಿ
Update: 2026-01-30 11:11 IST
ಕೊಪ್ಪಳ : ಕಿಮ್ಸ್ (ವೈದ್ಯಕೀಯ ವಿಜ್ಞಾನ ಸಂಸ್ಥೆ) ಆಡಳಿತಾಧಿಕಾರಿ ಬಿ.ಕಲ್ಲೇಶ ಅವರ ಮನೆ, ಕುಟುಂಬದ ಒಡೆತನದಲ್ಲಿರುವ ಶಾಲೆ–ಕಾಲೇಜು ಹಾಗೂ ಕಿಮ್ಸ್‌ನಲ್ಲಿನ ಅವರ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಯೆಂಬ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಲೋಕಾಯುಕ್ತ ಅಧಿಕಾರಿಗಳು ವಿವಿಧ ತಂಡಗಳಾಗಿ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬಿ. ಕಲ್ಲೇಶ ಅವರ ಕುಟುಂಬಕ್ಕೆ ಸಂಬಂಧಿಸಿದ ಭಾಗ್ಯನಗರದ ಯತ್ನಟ್ಟಿ ರಸ್ತೆಯಲ್ಲಿರುವ ನವಚೇತನ ಶಾಲೆ ಮತ್ತು ಕಾಲೇಜು, ಹಾಗು ಕಿಮ್ಸ್ ಕಚೇರಿಯಲ್ಲಿ ಹಣಕಾಸು ಹಾಗೂ ಆಸ್ತಿ ಸಂಬಂಧಿತ ದಾಖಲೆಗಳನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಹಿಂದೆ ವಾಲ್ಮೀಕಿ ನಿಗಮ ಹಗರಣದಲ್ಲಿ ಇವರ ಹೆಸರು ಕೇಳಿಬಂದಿದ್ದು, ಆ ಪ್ರಕರಣದ ಹಿನ್ನೆಲೆಯಲ್ಲಿ ಅಮಾನತ್ತು ಕೂಡ ಆಗಿದ್ದರು ಎಂದು ತಿಳಿದು ಬಂದಿದೆ.