×
Ad

ಕೊಪ್ಪಳ | ಕನ್ನಡದಲ್ಲಿ ನಾಮಫಲಕ ಹಾಕುವಂತೆ ನಗರಸಭೆ ಪೌರಾಯುಕ್ತರಿಂದ ಸೂಚನೆ

Update: 2025-11-06 17:55 IST

ಕೊಪ್ಪಳ : ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ಎಲ್ಲಾ ಉದ್ದಿಮೆದಾರರು ತಮ್ಮ ತಮ್ಮ ಅಂಗಡಿ, ವ್ಯಾಪಾರ ಮಾಡುವ ಸ್ಥಳದಲ್ಲಿನ ನಾಮಫಲಕದ ಶೇ.60 ರಷ್ಟು ಭಾಗವನ್ನು ಕನ್ನಡಕ್ಕಾಗಿ ಮೀಸಲಿಟ್ಟು ದಪ್ಪ ಅಕ್ಷರಗಳಲ್ಲಿ ಬರೆಯಿಸಿರುವ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ನಗರಸಭೆ ಪೌರಾಯುಕ್ತರು ಸೂಚಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯ್ದೆ 2022ರನ್ವಯ ಕನ್ನಡವನ್ನು ಸಮಾಜದ ಎಲ್ಲಾ ಸ್ಥರಗಳಲ್ಲಿ ಉಳಿಸುವ ನಿಟ್ಟಿನಲ್ಲಿ ಹಲವು ಅವಕಾಶಗಳನ್ನು ಕಲ್ಪಿಸಿದೆ. ಈ ಕಾಯ್ದೆಯ ಅವಕಾಶಗಳಡಿಯಲ್ಲಿ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಶೇ.60 ರಷ್ಟು ಸ್ಥಾನ ಕಲ್ಪಿಸಬೇಕೆಂದು ಸರ್ಕಾರ ಆದೇಶವನ್ನು ಹೊರಡಿಸಿದೆ. ಆದ್ದರಿಂದ ತಮ್ಮ ಅಂಗಡಿಗಳ ನಾಮಫಲಕಗಳಲ್ಲಿ ಒಟ್ಟು ನಾಮಫಲಕದ ಶೇ.60 ರಷ್ಟು ಭಾಗವನ್ನು ಕನ್ನಡಕ್ಕಾಗಿ ಮೀಸಲಿಟ್ಟು, ದಪ್ಪ ಅಕ್ಷರಗಳಲ್ಲಿ ಬರೆಯಿಸಲು ಕ್ರಮವಹಿಸತಕ್ಕದ್ದು ಜೊತೆಗೆ ನಗರದ ಹೆಸರನ್ನು ಕಡ್ಡಾಯವಾಗಿ ದಪ್ಪ ಅಕ್ಷರಗಳಲ್ಲಿ ಬರೆಯಿಸತಕ್ಕದ್ದೆಂದು ಆದೇಶವನ್ನು ಜಾರಿ ಮಾಡಲಾಗಿರುತ್ತದೆ.

ಉಳಿದ ಶೇ.40 ರಷ್ಟು ಭಾಗದಲ್ಲಿ ಅನ್ಯ ಭಾಷೆಗಳಿಗೆ ಅಥವಾ ಸಂಪೂರ್ಣವಾಗಿ ಕನ್ನಡದಲ್ಲಿ ಹಾಕಿಸಲು ಈ ಪ್ರಕಟಣೆಯ ದಿನದಿಂದ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಲ ತಿಳಿಸಲಾಗಿದೆ.

ತಪ್ಪಿದಲ್ಲಿ ಅಂಥಹ ನಾಮಫಲಕಗಳನ್ನು ತೆರವುಗೊಳಿಸಲು ಹಾಗೂ ತಮ್ಮ ಉದ್ದಿಮೆ ಪರವಾನಿಗೆಯನ್ನು ರದ್ದುಗೊಳಿಸಲು ನಿಯಮಾನುಸಾರ ಕ್ರಮವಹಿಸಲಾಗುವುದೆಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News