ಕೊಪ್ಪಳ | ಕಾರ್ಮಿಕ ಸಂಘಟನೆಗಳ ರಾಷ್ಟ್ರವ್ಯಾಪಿ ಮುಷ್ಕರ: ಪ್ರತಿಭಟನಾ ನಿರತ ಕಾರ್ಮಿಕ ಮುಖಂಡರ ಬಂಧನ
Update: 2025-07-09 14:04 IST
ಕೊಪ್ಪಳ: ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ, ಕಾರ್ಪೊರೇಟ್ ಉದ್ಯಮ ಪರ ನೀತಿಯ ವಿರುದ್ಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ರಾಷ್ಟ್ರ ವ್ಯಾಪಿ ಮುಷ್ಕರ ನಡೆಸುತ್ತಿದ್ದ ಅನೇಕ ಕಾರ್ಮಿಕ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ಕೊಪ್ಪಳ ನಗರದ ಅಶೋಕ ವೃತ್ತದ ಬಳಿ ನಡೆದಿದೆ.
ನಗರದ ಈ ಈಶ್ವರ ಪಾರ್ಕ್ ನಿಂದ ಪ್ರತಿಭಟನಾ ಮೆರವಣಿಗೆಯ ಮೂಲಕ ಅಶೋಕ ವೃತ್ತದ ಬಳಿ ಬಂದ ಪ್ರತಿಭಟನಾಕಾರರು ಬೃಹತ್ ಮಾನವ ಸರಪಳಿಯನ್ನು ರಚಿಸಿದರು. ಈ ವೇಳೆ ಸಂಚಾರ ದಟ್ಟಣೆ ಉಂಟಾದ ಕಾರಣಕ್ಕಾಗಿ ಪೊಲೀಸರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅನೇಕ ಮುಖಂಡರನ್ನು ಬಂಧಿಸಿ, ಬಸ್‌ನಲ್ಲಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಅಲ್ಲಮ ಪ್ರಭು ಬೆಟದೂರು, ಡಿ ಹೆಚ್ ಪೂಜಾರ್, ಕೆ.ಬಿ.ಗೋನಾಳ, ಬಸವರಾಜ ಶೀಲವಂತರ್, ಎಸ್.ಎ.ಗಫರ್, ಸೇರಿದಂತೆ ಅನೇಕ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.