ಕೊಪ್ಪಳ | ಸಮಾಜದಲ್ಲಿ ಸಮಗ್ರ ಅಭಿವೃದ್ಧಿ ಕಾಣಲು ಶಿಕ್ಷಣದಿಂದ ಮಾತ್ರ ಸಾಧ್ಯ : ಅಮ್ಜದ್ ಪಟೇಲ್
ಕೊಪ್ಪಳ : ಸಮಾಜದಲ್ಲಿರುವ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ನಗರದ ಶಿರಸಪ್ಪಯ್ಯನ ಮಠ ಅವರಣದಲ್ಲಿ ತಾಲೂಕು ಮಟ್ಟದ ವಿಶ್ವಕರ್ಮ ಸಮಾಜದ ನೌಕರರ ಸಂಘ ಮತ್ತು ವಿಶ್ವಕರ್ಮ ವಿದ್ಯಾರ್ಥಿ ನಿಲಯ ಇವರುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಕೊಪ್ಪಳ ಜಿಲ್ಲಾ ಮಟ್ಟದ ವಿಶ್ವಕರ್ಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಸಮಾಜಗಳು ಸುಧಾರಣೆ ಆಗಬೇಕಾದರೆ ಸಮಾಜದಲ್ಲಿರುವ ಮಕ್ಕಳಿಗೆ ಒಳ್ಳೆಯ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಮುಖಾಂತರ ಸಮಾಜವನ್ನು ಸುಧಾರಣೆ ಮತ್ತು ಅಭಿವೃದ್ಧಿ ಮಾಡುವ ಕೆಲಸ ಆಯ ಸಮಾಜದ ಮುಖಂಡರು ಶ್ರಮಿಸಬೇಕು ಎಂದರು.
ಜೆಡಿಎಸ್ ಪಕ್ಷದ ರಾಜ್ಯ ಮುಖಂಡ ಸಿವಿ ಚಂದ್ರಶೇಖರ್ ರವರು ಮಾತನಾಡಿದರು.
ವಿಶ್ವಕರ್ಮ ಸಮಾಜದ ಮುಖಂಡರು, ನೌಕರರು, ವಿದ್ಯಾರ್ಥಿಗಳ ಪಾಲಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಂತರ ಪ್ರತಿಭಾ ಪುರಸ್ಕಾರ ಸಮಾರಂಭ ಜರುಗಿತ್ತು, ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ವಿತರಣೆ ಮಾಡಲಾಯಿತು.