×
Ad

ಕೊಪ್ಪಳ | ವಿದೇಶಿ ಮಹಿಳೆ ಸಹಿತ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ: ಇಬ್ಬರ ಬಂಧನ

Update: 2025-03-08 17:39 IST

ಕೊಪ್ಪಳ: ಪ್ರವಾಸಿಗನ ಮೇಲೆ ಹಲ್ಲೆಗೈದು ಕೊಲೆ, ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲಿನ ಅತ್ಯಾಚಾರ​​​ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಬಂಧಿತರನ್ನು ಮಲ್ಲೇಶ್(22) ಮತ್ತು ಚೇತನ್ ಸಾಯಿ ಸಿಳ್ಳೇಕ್ಯಾತರ್(21) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿಯು ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪ್ರವಾಸಿ ತಾಣವಾದ ತಾಲೂಕಿನ ಸಣಾಪುರ ಗ್ರಾಮದಲ್ಲಿ ವಾಯುವಿಹಾರಕ್ಕೆಂದು ಹೊರಗೆ ಹೋಗಿದ್ದ ಸಂದರ್ಭದಲ್ಲಿ ವಿದೇಶಿಯರಿದ್ದ ಐವರ ಗುಂಪಿನ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವಾಚ್ಯ ಪದಗಳಿಂದ ನಿಂದಿಸಿ ವಿದೇಶಿ ಮಹಿಳೆ ಸಹಿತ ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದರು. ಅಲ್ಲದೆ, ಒರ್ವ ಪ್ರವಾಸಿಗನನ್ನು ಕಾಲುವೆ ನೂಕಿ ಹತ್ಯೆಗೈಯ್ಯಲಾಗಿತ್ತು.

ಮಾ.6ರಂದು ರಾತ್ರಿ 11 ಗಂಟೆ ಸುಮಾರಿಗೆ ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. 

ಈ ಬಗ್ಗೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗಾಗಿ ಆರು ತಂಡ ರಚನೆ ಮಾಡಲಾಗಿದೆ.

ಕೃತ್ಯ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ : ಎಸ್‌.ಪಿ

ಗಂಗಾವತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಸ್‌.ಪಿ.ಡಾ.ರಾಮ್ ಅರಸಿದ್ದಿ, ಗಾರೆ ಕೆಲಸ ಮಾಡುವ ಆರೋಪಿಗಳಿಬ್ಬರು ಕುಡಿದು ಗಲಾಟೆ ಮಾಡಿದ್ದಾರೆ. ಪ್ರವಾಸಿಗರನ್ನು ನೋಡಿ ಹಣ ಕಸಿದುಕೊಳ್ಳುವುದಕ್ಕೆ ಮುಂದಾಗಿದ್ದರು. ಈ ವೇಳೆ ಪ್ರವಾಸಿಗರ ಮತ್ತು ಆರೋಪಿಗಳ ನಡುವೆ ಗಲಾಟೆಯಾಗಿದೆ. ಕೃತ್ಯ ಮಾಡಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News