×
Ad

ಕೊಪ್ಪಳ | ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ಬಂಧನ

Update: 2025-05-27 21:40 IST

ಕೆಂಚಪ್ಪ 

ಕೊಪ್ಪಳ : ನಗರದಿಂದ ಕೆಲವೇ ಕಿ.ಮೀ ದೂರದಲ್ಲಿ ಇರುವ ಹೊಸಹಳ್ಳಿ ಗ್ರಾಮದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿಯನ್ನು ಕೊಪ್ಪಳ ಗ್ರಾಮೀಣ ಪೋಲೀಸ್ ಠಾಣೆಯ ಪೋಲಿಸರು ಬಂಧಿಸಿದ ಪ್ರಕರರಣ ತಡವಾಗಿ ಬೆಳಕಿಗೆ ಬಂದಿದೆ.

ಕೆಂಚಪ್ಪ ತಂದೆ ಯಂಕಪ್ಪ ಕುಕ್ಕೆಪ್ಪನವರ(27) ಎಂಬವನು ಆರೋಪಿ ಎಂದು ತಿಳಿದು ಬಂದಿದ್ದು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿದ ಕೆಂಚಪ್ಪ ಬಾಲಕಿಯ ಅತ್ಯಾಚಾರ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸಂತ್ರಸ್ಥ ಬಾಲಕಿ ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕೊಪ್ಪಳ, ಸಖಿ ಕೇಂದ್ರದಲ್ಲಿ ಇದ್ದು, ಪೋಲೀಸರು ಆರೋಪಿ ಹಾಗೂ ಆತನ ಸಹೋದರನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News