ಕೊಪ್ಪಳ : ರಸ್ತೆ ಅಪಘಾತ; 15ಕ್ಕೂ ಹೆಚ್ಚು ಕುರಿಗಳ ಸಾವು
Update: 2026-01-30 22:38 IST
ಕೊಪ್ಪಳ, ಜ.30: ಲಾರಿ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾದ ಪರಿಣಾಮ 15ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕು ವ್ಯಾಪ್ತಿಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಗುರುವಾರ ಸಂಭವಿಸಿದೆ.
ಕೊಪ್ಪಳ ತಾಲೂಕಿನ ಶಾಪುರ ಗ್ರಾಮದ ಸಮೀಪ ನಿರ್ಮಾಣ ಹಂತದಲ್ಲಿರುವ ಕೆಳಸೇತುವೆ ಬಳಿ ಅಪಘಾತ ಸಂಭವಿಸಿದ್ದು, ಲಾರಿ ವೇಗವಾಗಿ ಬಂದ ಪರಿಣಾಮ ಕುರಿಗಳ ಗುಂಪಿನ ಮೇಲೆ ಹಾದಿದೆ ಎನ್ನಲಾಗಿದೆ. ಘಟನೆಯಲ್ಲಿ ಸುಮಾರು 10 ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಪಶುವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸಂಬಂಧಪಟ್ಟ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.
ಶಾಪುರ ಗ್ರಾಮದ ಚಂದ್ರು ಎಂಬ ಕುರಿಗಾಹಿಗೆ ಸೇರಿದ ಕುರಿಗಳು ಮೃತಪಟ್ಟಿದ್ದು, ಕುರಿಗಾಹಿಗೆ ಸರಕಾರ ಸೂಕ್ತ ಪರಿಹಾರ ಒದಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.