×
Ad

ಕೊಪ್ಪಳ | ಸೆ.27ರಂದು ಜಿಲ್ಲೆಯ ಪದವಿ ಕಾಲೇಜುಗಳಲ್ಲಿ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ವಿದ್ಯಾರ್ಥಿಗಳ ನಿರ್ಧಾರ

Update: 2025-09-26 19:42 IST

ಕೊಪ್ಪಳ : ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ಇಂದು (ಸೆ.27) ಎಲ್ಲಾ ಪದವಿ ಕಾಲೇಜುಗಳ ಸ್ವಯಂ ಪ್ರೇರಿತ ತರಗತಿ ಬಹಿಷ್ಕಾರಕ್ಕೆ ಎಐಡಿಎಸ್‌ಓ ನೇತೃತ್ವದಲ್ಲಿ ವಿಧ್ಯಾರ್ಥಿಗಳು ನಿರ್ಧಾರಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಿಗೆ ಭೇಟಿ ಮಾಡಿ ತಮ್ಮ ತರಗತಿ ಬಹಿಷ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಎಐಡಿಎಸ್‌ಓ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸಿಂಧು ಕೆ. ಅವರು, ಈ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಆಗಿರುವ ಗೊಂದಲದಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಯುಜಿಸಿ ನಿಯಮಗಳು ಒಂದೆಡೆಯಾದರೆ, ಕೋರ್ಟಿನಲ್ಲಿ ನಡೆಯುತ್ತಿರುವ ಮೊಕದ್ದಮೆ ಇನ್ನೊಂದೆಡೆ. ಇದರ ನಡುವೆ ವಿದ್ಯಾರ್ಥಿಗಳು ಶೈಕ್ಷಣಿಕ ನಷ್ಟ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಪ್ಪಳ ಜಿಲ್ಲೆಯ ಎಲ್ಲಾ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಾಜ್ಯವಾಪಿ ನಡೆಯುತ್ತಿರುವ ಪದವಿ ಕಾಲೇಜುಗಳ ತರಗತಿ ಬಹಿಷ್ಕಾರದಲ್ಲಿ ಭಾಗವಹಿಸಿ ಐಕ್ಯತೆಯನ್ನು ಪ್ರದರ್ಶಿಸಲು ಕರೆ ನೀಡಿದರು.

ಈ ಸಂದರ್ಭದಲ್ಲಿ ಎಐಡಿಎಸ್‌ಓ ಜಿಲ್ಲಾ ಕಾರ್ಯಕರ್ತರಾದ ಶರಣಪ್ಪ, ತಿರುಪತಿ, ಅಪ್ಪಾಜಿ ಮತ್ತು ವಿದ್ಯಾರ್ಥಿಗಳಾದ ಭಾಗ್ಯ ವಿಜಯಲಕ್ಷ್ಮಿ ,ಬಸಮ್ಮ , ಆಕಾಶ್, ದುರ್ಗಾ, ಮನೋಹರ್ ಅಪ್ಪಾಜಿ ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News