×
Ad

Kuknoor | ಎಸ್‌ಐಆರ್ ಕಾರ್ಯದಲ್ಲಿ ಶೇ.100 ಪ್ರಗತಿ ಸಾಧಿಸಿ: ಬೆಟದೇಶ್ ಮಾಳೆಕೊಪ್ಪ

Update: 2026-07-10 22:07 IST

ಕುಕನೂರು : ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯವನ್ನು ಹಂತ ಹಂತವಾಗಿ ಚುರುಕುಗೊಳಿಸಿ, ಭರ್ತಿ ಮಾಡಿದ ಅರ್ಜಿಗಳನ್ನು ಅದೇ ದಿನ ಡಿಜಿಟಲೀಕರಣಗೊಳಿಸುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬೆಟದೇಶ್ ಮಾಳೆಕೊಪ್ಪ ಸೂಚಿಸಿದರು.

ತಾಲೂಕಿನ ರಾಜೂರ ಹಾಗೂ ಮಸಬಹಂಚಿನಾಳ ಗ್ರಾಮ ಪಂಚಾಯಿತಿಗಳಿಗೆ ಶುಕ್ರವಾರ ಭೇಟಿ ನೀಡಿ ಎಸ್‌ಐಆರ್ ಕಾರ್ಯದ ಪ್ರಗತಿ ಪರಿಶೀಲಿಸಿದ ಅವರು, ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್‌ಒ) ಅರ್ಜಿ ನಮೂನೆಗಳ ವಿತರಣೆ ಹಾಗೂ ಭರ್ತಿ ಮಾಡಿದ ಅರ್ಜಿಗಳ ಮರುಪಡೆಯುವಿಕೆ ಕುರಿತು ಮಾಹಿತಿ ಪಡೆದರು.

ಭರ್ತಿ ಮಾಡಿದ ಅರ್ಜಿಗಳನ್ನು ಯಾವುದೇ ವಿಳಂಬವಿಲ್ಲದೆ ಅದೇ ದಿನ ಡಿಜಿಟಲೀಕರಣಗೊಳಿಸಿ, ನಿಗದಿತ ಅವಧಿಯೊಳಗೆ ಶೇ.100ರಷ್ಟು ಪ್ರಗತಿ ಸಾಧಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಪಾರದರ್ಶಕ ಹಾಗೂ ದೋಷರಹಿತವಾಗಿ ಪೂರ್ಣಗೊಳಿಸಲು ಎಲ್ಲಾ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಆನಂದ ಗರೂರ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ವೈಜನಾಥ ಸಾರಂಗಮಠ, ಸಿದ್ದನಗೌಡ ರಬ್ಬನಗೌಡ್ರ, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಬಿಎಲ್‌ಒಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News