Kuknoor | ಇಸ್ಪೀಟ್ ಜೂಜಾಟದ ಮೇಲೆ ದಾಳಿ : 7 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2026-08-11 22:41 IST

ಕುಕನೂರು: ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಸಮೀಪದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಹಣ ಪಣಕ್ಕಿಟ್ಟು ಅಂದರ್–ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದ ಏಳು ಮಂದಿಯ ವಿರುದ್ಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ. 11ರಂದು ರಾತ್ರಿ 9.15ರ ಸುಮಾರಿಗೆ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪಿಎಸ್‌ಐ ಎಸ್.ಪಿ. ನಾಯ್ಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ವಶಕ್ಕೆ ಪಡೆಯಲಾಯಿತು.

ದಾಳಿಯಲ್ಲಿ 19,700 ರೂ. ನಗದು, 52 ಇಸ್ಪೀಟ್ ಎಲೆಗಳು ಹಾಗೂ ಒಂದು ಟವಲ್ ಸೇರಿದಂತೆ ಜೂಜಾಟಕ್ಕೆ ಬಳಸಿದ್ದ ಸಾಮಗ್ರಿಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News