ಕುಕನೂರು: ತಾಲ್ಲೂಕಿನ ಮಂಡಲಗಿರಿ ಗ್ರಾಮದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದುಕೊರತೆ ಸಭೆ ಸೋಮವಾರ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಯಲಬುರ್ಗಾ ವೃತ್ತ ನಿರೀಕ್ಷಕ ಮೌನೇಶ್ವರ ಪಾಟೀಲ ಮಾತನಾಡಿ, ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬೇಕು. ಜನರ ಕುಂದುಕೊರತೆಗಳಿಗೆ ಪರಿಹಾರ ಕಲ್ಪಿಸಲು ಪೊಲೀಸ್ ಇಲಾಖೆ ಬದ್ಧವಾಗಿದೆ ಎಂದು ಹೇಳಿದರು.

ಗ್ರಾಮದಲ್ಲಿ ಇಸ್ಪೀಟ್, ಜೂಜಾಟ ಹಾಗೂ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಗ್ರಾಮಸ್ಥರು ಸಭೆಯಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor