×
Ad

ಕುಷ್ಟಗಿ | ಬಂಡ್ರಗಲ–ಪುರತಗೇರಿ ರಸ್ತೆ, ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Update: 2025-12-25 17:43 IST

ಕುಷ್ಟಗಿ: ಹನುಮಸಾಗರ ಸಮೀಪದ ಬಂಡ್ರಗಲ ಗ್ರಾಮದಿಂದ ಪುರತಗೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಕೆಕೆಆರ್‌ಡಿಬಿ ಅನುದಾನದಲ್ಲಿ ಮಂಜೂರು ಮಾಡಲಾಗಿದ್ದು, ಇಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರೂ ಶಾಸಕರಾದ ದೊಡ್ಡನಗೌಡ ಎಚ್. ಪಾಟೀಲ್ ಅವರು ಭೂಮಿ ಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಪುರತಗೇರಿ ಗ್ರಾಮದ ವಿವಿಧ ವಾರ್ಡುಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೂ ಭೂಮಿ ಪೂಜೆ ನಡೆಸಲಾಯಿತು.

ಈ ರಸ್ತೆ ಹಾಗೂ ಸಿಸಿ ರಸ್ತೆ ಕಾಮಗಾರಿಗಳು ಗ್ರಾಮೀಣ ಸಂಪರ್ಕವನ್ನು ಸುಧಾರಿಸುವುದರೊಂದಿಗೆ ಸಾರ್ವಜನಿಕರ ದಿನನಿತ್ಯದ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ದೊಡ್ಡನಗೌಡ ಎಚ್.ಪಾಟೀಲ್ ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಮಲ್ಲಣ್ಣ ಪಲ್ಲೆ, ಬಸವರಾಜ ಹಳ್ಳೂರು, ನಾಗರಾಜ ಕಮತರ, ಸುರೇಶ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ಗೌಡ್ರು, ಹುಲಗೇರಿ ಬಾಲನಗೌಡ್ರು ಗ್ರಾಮ ಪಂಚಾಯತ್‌ ಅಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News