×
Ad

ಕೊಪ್ಪಳ | ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಮೃತ್ಯು

Update: 2024-12-31 13:39 IST

ಕೊಪ್ಪಳ : ರಾಜ್ಯದಲ್ಲಿ ಬಾಣಂತಿಯರ ಸಾವಿನ ಸಂಖ್ಯೆ ಹೆಚ್ಚುತಿದ್ದು, ಈ ಮಧ್ಯೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ.

ಯಲಬುರ್ಗಾ ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದ ನಿವಾಸಿ ರೇಣುಕಾ ಹಿರೇಮನಿ ಮೃತ ಬಾಣಂತಿ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ ಹೆರಿಗೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆತರಲಾಗಿತ್ತು, ರಾತ್ರಿ 2 ಗಂಟೆಯ ಸುಮಾರಿಗೆ ಸಿಝರಿನ್ ಮಾಡಲಾಗಿದೆ. ಆದರೆ, ಈ ವೇಳೆ ಮಗು ಮೃತಪಟ್ಟಿದೆ ಎನ್ನಲಾಗಿದೆ.

ಬಳಿಕ ಬಾಣಂತಿಯನ್ನು ವೈದ್ಯರು ಪರೀಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ಆದರೆ, ಸ್ವಲ್ಪ ಸಮಯದ ನಂತರ ವಾಂತಿಯಾಗಲು ಶುರುವಾಗಿದೆ, ನಂತರ 4 ಗಂಟೆಯ ಸುಮಾರಿಗೆ ಬಾಣಂತಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News