ಕೊಪ್ಪಳ : ಮೈಸೂರು ದಸರಾ ಉದ್ಘಾಟಕರಾಗಿ ಗವಿಸಿದ್ದೇಶ್ವರ ಶ್ರೀಗೆ ಅಧಿಕೃತ ಆಹ್ವಾನ
ಕೊಪ್ಪಳ: ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ ನೀಡಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಸೋಮವಾರ ಗವಿಮಠಕ್ಕೆ ಭೇಟಿ ನೀಡಿ, ಸ್ವಾಮೀಜಿಗೆ ಫಲಪುಷ್ಪ ನೀಡಿ ಆತ್ಮೀಯವಾಗಿ ಆಹ್ವಾನಿಸಿದರು.
ಈ ಸಂದರ್ಭ ಸಂಸದ ರಾಜಶೇಖರ ಹಿಟ್ನಾಳ, ಶಾಸಕ ರಾಘವೇಂದ್ರ ಹಿಟ್ನಾಳ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಜಿಲ್ಲಾಧಿಕಾರಿ ಸುರೇಶ ಇಟ್ನಾಳ ಉಪಸ್ಥಿತರಿದ್ದರು.
ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಸ್ವಾಮೀಜಿ ಆಯ್ಕೆಯಾಗಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ ಎಂದು ಸಚಿವರು ಈ ಸಂದರ್ಭದಲ್ಲಿ ಹರ್ಷ ವ್ಯಕ್ತಪಡಿಸಿದರು.