×
Ad

ಕೊಪ್ಪಳದಲ್ಲಿ ಹೊಸ ಇತಿಹಾಸ ದಾಖಲಾಗಿದೆ: ಸಚಿವ ಶಿವರಾಜ ತಂಗಡಗಿ

Update: 2025-10-06 16:40 IST

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಅಂದಾಜು 2,000 ಕೋಟಿ ರೂ.ಮೊತ್ತದ ನಾನಾ ಅಭಿವೃದ್ಧಿ ಕಾರ್ಯಗಳಿಗೆ ಇಂದು (ಅ.6) ಚಾಲನೆ ದೊರೆತಿದ್ದು, ಇದು ಕೊಪ್ಪಳದ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರು ಹೇಳಿದರು.

ಕೊಪ್ಪಳದಲ್ಲಿ ನಡೆದ ಎರಡು ಸಾವಿರ ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ ಜಿಲ್ಲೆಗಳ ಜನತೆಗೆ ಸಾಕಷ್ಟು ಅನುಕೂಲವಾದ 371ಜೆ ಯೋಜನೆ ಜಾರಿಗೆ ಶ್ರಮಿಸಿದ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಅವರ ಭಾವಚಿತ್ರವನ್ನು ಮತ್ತು ಕಡುಬಡವರ ಬಗ್ಗೆ ಹೆಚ್ಚಿನ ಕಾಳಜಿ ಹೊಂದಿದ ಅನ್ನರಾಮಯ್ಯ ಎಂದೇ ಖ್ಯಾತಿ ಹೊಂದಿದ ಸಿದ್ದರಾಮಯ್ಯವರ ಭಾವಚಿತ್ರವನ್ನು ನಾವೆಲ್ಲರೂ ನಮ್ಮ ಮನೆಯಲ್ಲಿ ಹಾಕಬೇಕಿದೆ ಎಂದು ತಿಳಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದಲ್ಲಿ ಆರಂಭಿಸಿರುವ ಸಮೀಕ್ಷೆಯಿಂದ ಜನತೆಗೆ ಅನುಕೂಲವಾಗಲಿದೆ. ಈ ಸಮೀಕ್ಷೆಯ ಮೂಲಕ ಸಿದ್ದರಾಮಯ್ಯ ಅವರು ಜನರನ್ನು ಕೂಡಿಸುವ ಕಾರ್ಯ ಮಾಡುತ್ತಿದ್ದಾರೆ ಎಂದ ಸಚಿವರು, ಈ ಸಮೀಕ್ಷೆಯು ರಾಜ್ಯದಲ್ಲಿ ಈಗಾಗಲೇ ಶೇ.75ರಷ್ಟು ಪೂರ್ಣವಾಗಿದೆ ಎಂದರು.

ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ಶೇ.98ರಷ್ಟು ಸಮೀಕ್ಷೆ ನಡೆದಿದೆ. ಯಲಬುರ್ಗಾ, ಕಾರಟಗಿ ಮತ್ತು ಕುಕನೂರ ತಾಲೂಕಿನಲ್ಲಿ ಈ ಸಮೀಕ್ಷೆಯು ಈಗಾಗಲೇ ಪೂರ್ಣವಾಗಿದೆ ಎಂದು ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News