×
Ad

ʼಸಮೀಕ್ಷೆʼ ಮುಂದುವರೆಸುವ ನಿರ್ಧಾರವಾಗಿಲ್ಲ: ಸಚಿವ‌ ಶಿವರಾಜ್ ತಂಗಡಗಿ

Update: 2025-10-30 20:28 IST

ಶಿವರಾಜ್ ತಂಗಡಗಿ

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಶುಕ್ರವಾರಕ್ಕೆ ಅಂತ್ಯವಾಗಲಿದೆ. ಯಾವುದೇ ಕಾರಣಕ್ಕೂ ಅವಧಿ ಮುಂದುವರಿಸುವ ನಿರ್ಧಾರವಾಗಿಲ್ಲ. ಆನ್‌ಲೈನ್‌ನಲ್ಲಿ ಮಾಹಿತಿ ನೀಡುವವರಿಗೆ ನ.10 ರವರೆಗೆ ಅವಕಾಶ ನೀಡಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ‌ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,‌ ಗುರುವಾರದ ಅಂತ್ಯಕ್ಕೆ ರಾಜ್ಯದಲ್ಲಿ (ಬೆಂಗಳೂರು ನಗರ ಹೊರತುಪಡಿಸಿ) 1,46,53,638 ಮನೆಗಳು ಮತ್ತು 5,52,57,205 ಜನರ ಅಂದರೇ ಶೇ.101.47 ಸಮೀಕ್ಷೆ ಮುಗಿದಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇ.48.32 ಸಮೀಕ್ಷೆ ಮುಗಿದಿದೆ. ಇದಕ್ಕೆ ಕೆಲವು ತಾಂತ್ರಿಕ ಕಾರಣಗಳು ಕಂಡುಬಂದಿದೆ. ಬೆಂಗಳೂರಿನಲ್ಲಿ ವಾಸವಾಗಿರುವ ಬಹುತೇಕರು ಹೊರ ಜಿಲ್ಲೆಯಿಂದ ಬಂದವರು ಆಗಿದ್ದು, ಸ್ವಂತ ಊರಿನಲ್ಲಿ ಮಾಹಿತಿ ಕೊಟ್ಟಿದ್ದಾರೆ ಎಂದರು.

ಅಲ್ಲದೆ, ವಿದ್ಯುತ್ ಮೀಟರ್‌ಗಳು ಸಹ ಹೆಚ್ಚಿಗೆ ಇರುವ ಪರಿಣಾಮ ಶೇಕಡಾವಾರು ಪ್ರಮಾಣ ಕಡಿಮೆ ತೋರಿಸುತ್ತಿದೆ. ಯಾಕೇ ಸಮೀಕ್ಷೆ ಕಡಿಮೆಯಾಗಿದೆ ಎಂಬುದರ ಬಗ್ಗೆ ಪ್ರತ್ಯೇಕವಾಗಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಈ ಬಗ್ಗೆ ಶುಕ್ರವಾರ ಹೆಚ್ಚಿನ ಮಾಹಿತಿ ನೀಡುವುದಾಗಿ ಶಿವರಾಜ ಎಸ್.ತಂಗಡಗಿ ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News