×
Ad

ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಪೂರಕವಾಗಿದೆ: ಶಂಶಾದಬೇಗಂ

Update: 2025-12-05 18:22 IST

ಕನಕಗಿರಿ: ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ಹಾಗೂ ಸ್ಪರ್ಧಾತ್ಮಕ ಮನೋಭಾವ, ಜ್ಞಾನ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿ ಯಾಗಿದೆ ಎಂದು ನೌಕರರ ಸಂಘದ ತಾಲೂಕು ಅಧ್ಯಕ್ಷೆ ಶಂಶಾದಬೇಗಂ ಹೇಳಿದರು.

ಪಟ್ಟಣದ ಕೆರೆ ರಸ್ತೆಯಲ್ಲಿರುವ ಸರಕಾರಿ ಆದರ್ಶ ವಿದ್ಯಾಲಯ, ಕನಕಗಿರಿ ಉತ್ತರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವವನ್ನುದ್ದೇಶಿಸಿ ಮಾತನಾಡಿದ ಶಂಶಾದಬೇಗಂ, ಪ್ರತಿ ಮಕ್ಕಳಲ್ಲಿ ಒಂದು ವಿಶೇಷ ಪ್ರತಿಭೆ ಇರುತ್ತದೆ. ಅದರ ಅನಾವರಣಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.  

ಸಿಆರ್ ಪಿ ರಾಜೀವ್‌ ಅವರು ಮಾತನಾಡಿ ಕಲಿಕೆ ಎಂದರೆ ಕೇವಲ ಅಂಕ ಗಳಿಕೆ ಅಲ್ಲ. ಕಲಿಕೆ ಜೊತೆ ವಿವಿಧ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಅನುಕೂಲವಾಗುತ್ತದೆ ಎಂದು ಹೇಳಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ ಶಿಕ್ಷಕ ಶಿವಕುಮಾರ್ ವಹಿಸಿದರು. ಎಸ್‌ಡಿಎಂಸಿ ಅಧ್ಯಕ್ಷ ಹೊನ್ನೂರ ಸಾಬ, ಶಿಕ್ಷಣ ಸಂಯೋಜಕ ಅಂಜಿನಯ್ಯ, ಕೆಪಿಎಸ್ ಶಾಲೆಯ ಪ್ರಾಂಶುಪಾಲ ಜಗದೀಶ ಹಾದಿಮನಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್, ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ಉಮೇಶ್ ಕಂದಕೂರು, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹುಸೇನಬಿ ಚಳ್ಳಮರದ್, ಉಪಾಧ್ಯಕ್ಷ ಕಂಠಿರಂಗ ನಾಯಕ, ಸದಸ್ಯ ಹನುಮಂತ ಬಸರಿಗಿಡದ, ಪ್ರಮುಖರಾದ ನಾಗರಾಜ ಬಾವಿಕಟ್ಟಿ, ಬೀರಪ್ಪ, ವೀರಭದ್ರ, ಮಕ್ತುಮ್ ಸಾಬ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News