×
Ad

ಕೊಪ್ಪಳ | ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ : ಪೊಲೀಸರಿಂದ ರೆಸಾರ್ಟ್ ಗಳಿಗೆ ಭೇಟಿ

Update: 2025-03-11 09:58 IST

ಗಂಗಾವತಿ\ಕೊಪ್ಪಳ: ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಅತ್ಯಾಚಾರ ಒಬ್ಬನನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸಾಪುರ್ ಚೆಕ್ ಪೋಸ್ಟ್ ಹಾಗೂ ಸುತ್ತಮುತ್ತಲಿನ ರೆಸಾರ್ಟ್ ಗಳಿಗೆ ಭೇಟಿ ನೀಡಿ ದಾಖಲೆಗಳು ಹಾಗೂ ಸಿಸಿಟಿವಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.

ಹೋಂ ಸ್ಟೇ, ರೆಸಾರ್ಟ್‌ನಲ್ಲಿನ ದಾಖಲಾತಿ ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ, ಸುರಕ್ಷತೆಯ ಬಗ್ಗೆ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರೆಸಾರ್ಟ್ ಮಾಲಕರಿಗೆ ಸೂಚಿಸಲಾಯಿತು ಎಂದು ತಿಳಿದುಬಂದಿದೆ.

‘ಐವರು ಪ್ರವಾಸಿಗರು ರಾತ್ರಿ ಸಮಯದಲ್ಲಿ ಗಿಟಾರ್ ಬಾರಿಸುತ್ತಾ ಕೆರೆಯ ಬಳಿ ಕುಳಿತಿದ್ದಾಗ ಮೂವರು ಯುವಕರಿದ್ದ ಗುಂಪು ‘ಇಬ್ಬರ ಮೇಲೆ ಅತ್ಯಾಚಾರ ಎಸಗೆ ಒಬ್ಬನನ್ನು ಕಾಲುವೆಗೆ ತಳ್ಳಿ ಕೊಲೆ ಮಾಡಲಾಗಿತ್ತು.

ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸರಿಂದ ಆ ಭಾಗದ ಎಲ್ಲಾ ರೆಸಾರ್ಟ್‌ಗಳಿಗೆ ಭೇಟಿ ನೀಡಿ ದಾಖಲಾತಿ ಸೇರಿ ಸುರಕ್ಷತೆಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News