×
Ad

ಶೀಘ್ರದಲ್ಲೇ 1 ಸಾವಿರ ಪಿಎಸ್ಸೈ ಹುದ್ದೆಗಳ ನೇಮಕಾತಿ: ಡಾ.ಜಿ.ಪರಮೇಶ್ವರ್

Update: 2025-06-22 17:48 IST

ಜಿ.ಪರಮೇಶ್ವರ್‌

ಕೊಪ್ಪಳ : ಪಿಎಸ್ಸೈ ನೇಮಕಾತಿ ಹಗರಣದ ಬಳಿಕ ಐದು ವರ್ಷಗಳ ಕಾಲ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ. ಸದ್ಯ ಒಂದು ಸಾವಿರ ಪಿಎಸ್ಸೈ ಹುದ್ದೆಗಳು ಖಾಲಿಯಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್ಸೈ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರೆಲ್ಲ ತರಬೇತಿ ಪಡೆಯುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಎಂಟು ಸಾವಿರ ಕಾನ್‍ಸ್ಟೇಬಲ್ ಹುದ್ದೆಗಳು ಖಾಲಿಯಿವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರಾಜ್ಯದಲ್ಲಿ ಹೆಚ್ಚುವರಿ ಟ್ರಾಫಿಕ್ ಪೊಲೀಸ್ ಠಾಣೆ ಸೇರಿದಂತೆ ಇನ್ನಿತರ ಕಾರ್ಯಚಟುವಟಿಕೆಗಳಿಗೆ ಮುಂದಿನ ಬಜೆಟ್‍ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದು ಡಾ.ಜಿ.ಪರಮೇಶ್ವರ್ ಹೇಳಿದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News