×
Ad

ತುಂಗಾಭದ್ರಾ ಅಣೆಕಟ್ಟಿನ ಗೇಟ್ ಲಿಂಕ್ ಮುರಿದ ಹಿನ್ನೆಲೆ: ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ

Update: 2024-08-11 11:39 IST

ಕೊಪ್ಪಳ, ಆ.11: ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್ ಲಿಂಕ್ ಮುರಿದಿರುವುದರಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಾಶಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಎರಡು ವರ್ಷಗಳ ಬಳಿಕ ಅಣೆಕಟ್ಟು ಭರ್ತಿಯಾಗಿರುವ ಕಾರಣ ವಾರಾಂತ್ಯದ ದಿನಗಳಲ್ಲಿ ತಂಡೋಪ ತಂಡವಾಗಿ ಜನ ಪ್ರತೀ ವಾರವೂ ಬರುತ್ತಿದ್ದರು. ಸೆಲ್ಪಿ ತೆಗೆದುಕೊಂಡು ಖುಷಿಪಡುತ್ತಿದ್ದರು. ಆದ್ದರಿಂದ ಇಂದು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಸೇತುವೆ ಮೇಲೆ ಅತಿ ಗಣ್ಯವ್ಯಕ್ತಿಗಳು ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ನಿರ್ಬಂಧ ಹೇರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News