ಕೊಪ್ಪಳಕ್ಕೆ ನೂತನ ಎಸ್ಪಿಯಾಗಿ ಸಾಹಿಲ್ ಬಾಗ್ಲಾ ನೇಮಕ
ಕೊಪ್ಪಳ: ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಸಾಹಿಲ್ ಬಾಗ್ಲಾ ಅವರನ್ನು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಾಹಿಲ್ ಬಾಗ್ಲಾ ಅವರು ಕರ್ನಾಟಕ ಕೇಡರ್‌ನ 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರು ನಗರದ ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಸರ್ಕಾರದ ಆದೇಶದಂತೆ ಅವರನ್ನು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ.
ಮೂಲತಃ ಪಂಜಾಬ್ ರಾಜ್ಯದವರಾದ ಸಾಹಿಲ್ ಬಾಗ್ಲಾ ಅವರು ಬಿ.ಟೆಕ್ ಪದವೀಧರರಾಗಿದ್ದಾರೆ. ಈ ಹಿಂದೆ ಧಾರವಾಡ ಡಿಸಿಪಿ ಹಾಗೂ ಗುಪ್ತಚರ ವಿಭಾಗದ ಡಿಸಿಪಿಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.