×
Ad

ಸಿದ್ಧರಾಮಯ್ಯ ಅವರು ರಾಷ್ಟ್ರಕಂಡ ಜನಪರ ಸಿಎಂ : ಬಸವರಾಜ ರಾಯರೆಡ್ಡಿ

Update: 2025-10-06 16:36 IST

ಕೊಪ್ಪಳ :  ಸಿದ್ಧರಾಮಯ್ಯ ಅವರು ಈ ರಾಷ್ಟ್ರಕಂಡ ಜನಪರ ಹಾಗೂ ಜನಪ್ರಿಯ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಹೇಳಿದರು.

ಕೊಪ್ಪಳದಲ್ಲಿ ಜಿಲ್ಲಾಡಳಿತದಿಂದ ಅ.6ರಂದು ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿದ್ಧರಾಮಯ್ಯ ಅವರ ಆಡಳಿತದ ಶಿಸ್ತು ಇತರರಿಗೆ ಮಾದರಿಯಾಗಿದೆ ಎಂದು ಅವರು ಮುಖ್ಯಮಂತ್ರಿಗಳ ಆಡಳಿತದ ಕಾರ್ಯವೈಖರಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಆರ್ಥಿಕ ಶಿಸ್ತಿನಿಂದ ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 3 ಕೋಟಿ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಇದುವರೆಗೆ 559 ಕೋಟಿ ಮಹಿಳೆಯರು ಉಚಿತವಾಗಿ ಸಂಚರಿಸಿರುವುದು ಗೋಲ್ಡನ್ ರೆಕಾರ್ಡ್‌ ಆಗಿದೆ. 1.24 ಕೋಟಿಗು ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2,000 ರೂ. ಸಹಾಯಧನ ತಲುಪುತ್ತಿದೆ. 4.57 ಲಕ್ಷ ಜನರಿಗೆ ಅನ್ನಭಾಗ್ಯ ಯೋಜನೆಯಡಿ ಪಡಿತರ ಕೊಡುತ್ತಿದ್ದೇವೆ. ರಾಜ್ಯದ 1.68 ಕೋಟಿ ಮನೆಗಳಿಗೆ ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳ ಅನುಕೂಲತೆ ದೊರೆಯುತ್ತಿದೆ ಎಂದು ಅವರು ತಿಳಿಸಿದರು.

ಈ ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಮುಖ್ಯಮಂತ್ರಿಗಳು 83 ಸಾವಿರ ಕೋಟಿ ರೂ. ಹಣವನ್ನು ನಾನಾ ಅಭಿವೃದ್ದಿ ಕಾರ್ಯಗಳಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿನ 36 ಲಕ್ಷ ರೈತರಿಗೆ ಪಂಪಸೇಟ್ ಹಾಗೂ ಇನ್ನಿತರ ಸೌಕರ್ಯ ಒದಗಿಸಲಾಗಿದೆ. ಇದೇ ರೀತಿ ಸಾಕಷ್ಟು ಯೋಜನೆ ಜಾರಿ ಮಾಡಿದ್ದೇವೆ. ರಾಜ್ಯ ಸರ್ಕಾರವು ವಾರ್ಷಿಕವಾಗಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ವ್ಯಯಿಸುತ್ತಿದೆ ಎಂದು ಬಸವರಾಜ ರಾಯರೆಡ್ಡಿ ಅವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News