×
Ad

ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯ ಕಲಿಕೆ ಅಗತ್ಯ: ಪ್ರೊ.ಅಕ್ಕಿ ಮಾರುತಿ

Update: 2026-03-06 21:53 IST

ಗಂಗಾವತಿ: ಯಾವುದೇ ಕ್ಷೇತ್ರದಲ್ಲೂ ಇಂದು ಕೌಶಲ್ಯಗಳಿಗೆ ಪ್ರಾಧಾನ್ಯತೆ ಇದೆ. ಹಾಗಾಗಿ ಕಾಲೇಜು ಶಿಕ್ಷಣದಲ್ಲೂ ಕೌಶಲ್ಯಾಧಾರಿಕ ಕಲಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ನಗರದ ಶ್ರೀ ಕೊಲ್ಲಿ ನಾಗೇಶ್ವರರಾವ್‌ ಗಂಗಯ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಅಕ್ಕಿ ಮಾರುತಿ ಹೇಳಿದರು.

ಕಾಲೇಜಿನ ಸಭಾಂಗಣದಲ್ಲಿ ಮಾರ್ಚ್‌ 6ರಂದು ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಡಿ ನಡೆದ ಆನ್‌ಲೈನ್‌ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಾಣಿಜ್ಯಶಾಸ್ತ್ರ, ಅರ್ಥಶಾಸ್ತ್ರ ಮತ್ತು ನಿರ್ವಹಣಾಶಾಸ್ತ್ರದಲ್ಲಿ ಕೌಶಲ್ಯ ತರಬೇತಿ ಇಂದು ಅಗತ್ಯವಾಗಿದೆ. ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆಯಲ್ಲಿ ಶ್ರದ್ಧೆ ವಹಿಸಿದರೆ ಭವಿಷ್ಯದ ದಿನಗಳು ಮತ್ತಷ್ಟು ಉತ್ತಮವಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಧಾರವಾಡದ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ಪೂರ್ಣಿಮಾ ಡಿ.ಕಾಂಬ್ಳೆ ಅವರು ವಿವಿಧ ಕ್ಷೇತ್ರಗಳಲ್ಲಿರುವ ಕೌಶಲ್ಯಗಳ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಶಿವರಾಜ ಗುರಿಕಾರ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಇಂಥ ವಿಶೇಷ ಉಪನ್ಯಾಸಗಳ ಮೂಲಕ ಕಲಿಕಾಸಕ್ತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇಂದಿನ ದಿನಗಳಲ್ಲಿ ಉದ್ಯಮ ಮತ್ತು ಉದ್ಯೋಗಗಳಲ್ಲೂ ಕೌಶಲ್ಯಗಳಿಗೆ ವಿಶೇಷ ಸ್ಥಾನ-ಮಾನಗಳಿವೆ ಎಂದು ತಿಳಿಸಿದರು.

ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮೆಹತಾಜ್‌ ಅಂಜುಮ್ ಕಾರ್ಯಕ್ರಮ ನಿರ್ವಹಿಸಿದರು. ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕ ಮಂಜುನಾಥ, ಸಹ ಸಂಚಾಲಕ ಅನಿಲ್‌ಕುಮಾರ್‌ ಉಪಸ್ಥಿತರಿದ್ದರು. ವಿವಿಧ ವಿಭಾಗಗಳ ವಿದ್ಯಾರ್ಥಿಗಳು ವಿಶೇಷ ಉಪನ್ಯಾಸ ಕಾರ್ಯಕ್ರಮದ ಪ್ರಯೋಜನ ಪಡೆದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News