ತಾವರಗೇರಾ | ಇಸ್ಪೀಟ್ ಜೂಜಾಟ: ಏಳು ಮಂದಿಯ ಬಂಧನ
Update: 2026-08-12 21:37 IST
ತಾವರಗೇರಾ: ಸಮೀಪದ ಮುದೇನೂರು ಗ್ರಾಮದ ಶ್ರೀ ಶಶಿಧರಸ್ವಾಮಿ ಶಾಲೆಯ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯ ಮೇಲೆ ತಾವರಗೇರಾ ಪೊಲೀಸರು ಮಂಗಳವಾರ ದಾಳಿ ನಡೆಸಿದರು.
ಪಿಎಸ್‌ಐ ಚಂದ್ರಪ್ಪ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ, ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ವಶಕ್ಕೆ ಪಡೆದರು. ಆರೋಪಿಗಳಿಂದ 2,340 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಂತರ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಕುರಿತು ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.