×
Ad

ಮುನಿರಬಾದ್‌ಗೆ ಆಗಮಿಸಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ

Update: 2026-06-25 11:17 IST

ಕೊಪ್ಪಳ, ಜೂ.25: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಾಯತು ಮೈದಾನದಲ್ಲಿನ ಹೆಲಿಪ್ಯಾಡ್‌ಗೆ ಬಂದಿಳಿದ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.

ಎ. ರೇವಂತ್ ರೆಡ್ಡಿ ಅವರೊಂದಿಗೆ ನೀರಾವರಿ ಇಲಾಖೆ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಸಹ ಆಗಮಿಸಿದ್ದಾರೆ.

ಈ ವೇಳೆ ಶಾಸಕ ಬಸವರಾಜ ರಾಯರೆಡ್ಡಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News