×
Ad

ಬಸನಗೌಡ ಪಾಟೀಲ್ ಯತ್ನಾಳ್ ಬಂಧನಕ್ಕೆ ವೆಲ್ಫೇರ್ ಪಾರ್ಟಿ ಮಹಿಳಾ ವಿಭಾಗ ಆಗ್ರಹ

Update: 2025-09-18 11:56 IST

ಕೊಪ್ಪಳ:ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಯತ್ನಾಳ್ ಮಾತನಾಡುವಾಗ ಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ ಹೊರತು ಒಬ್ಬ ಸಾಮಾನ್ಯ ದಲಿತ ಮಹಿಳೆಗೂ ಅವಕಾಶ ಇಲ್ಲ ಎಂದು ಹೇಳುವ ಮೂಲಕ ಇಡೀ ರಾಜ್ಯದ ದಲಿತ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಕೂಡಲೇ ಅವರನ್ನು ಬಂಧಿಸುವಂತೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಮಹಿಳಾ ವಿಭಾಗ ರಾಜ್ಯಧ್ಯಕ್ಷೆ ಸಬಿಹಾ ಪಟೇಲ್ ಅಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,  ಸಾರ್ವಜನಿಕವಾಗಿ ದಲಿತ ಮಹಿಳೆಯರ ಬಗ್ಗೆ ಕೀಳುಮಟ್ಟದಲ್ಲಿ ಹೇಳಿಕೆ ನೀಡುವ ಮೂಲಕ ಅವಮಾನ ಮಾಡಿದ್ದಾರೆ. ಇಂತಹ ಕೊಳಕು ಮನಸ್ಥಿತಿಯ ಮತ್ತು ಕೋಮು ಸಂಘರ್ಷದ, ಪ್ರಚೋದನಕಾರಿ ಹೇಳಿ ನೀಡಿರುವ ಇವರನ್ನು ವಿಡಿಯೋ ಆಧಾರದ ಮೇಲೆ ಎಸ್ಸಿ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಶಾಸಕ ಬಸವನಗೌಡ ಯತ್ನಾಳ ಅವರು ದಲಿತರ, ಅಲ್ಪಸಂಖ್ಯಾತರ ಮಹಿಳೆಯರಿಗೆ ಅವಮಾನ ಮಾಡುವ ರೀತಿಯಲ್ಲಿ ಹೇಳಿಕೆಗಳನ್ನು ನಿರಂತರ ವಾಗಿ ಕೊಡುತ್ತಿದ್ದಾರೆ, ಯತ್ನಾಳ ಅವರ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ವೈರಲ್ ಆಗಿ ದಲಿತ ಹಾಗೂ ಅಲ್ಪಸಂಖ್ಯಾತ ಸಮಾಜಕ್ಕೆ ತುಂಬಾ ನೋವಾಗಿರುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜದಲ್ಲಿ ಇಂಥ ಕೋಮುಪ್ರಚೋದನೆ ಹೇಳಿಕೆ ನೀಡಿ ಅಶಾಂತಿಗೆ ಕಾರಣರಗುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು. ಒಬ್ಬ ಶಾಸಕರಾಗಿ ಜನರ ಸಮಸ್ಯೆಗಳ ಬಗ್ಗೆ ಕೆಲಸ ಮಾಡುವ ಬದಲು ಹಿಂದೂ ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುವುದನ್ನೇ ಕಸಬು ಮಾಡಿಕೊಂಡಿದ್ದಾರೆ, ಸರಕಾರ ಇಂಥ ವೆಕ್ತಿಗಳ ಮೇಲೆ ಕಠಿಣ ಕ್ರಮ ವಹಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News