ಯಲಬುರ್ಗಾ: ತಾಲೂಕಿನ ತಿಪ್ಪನಾಳ ಗ್ರಾಮದಲ್ಲಿ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.

ಜಯಂತಿ ಅಂಗವಾಗಿ ಕನಕದಾಸ ವೃತ್ತವನ್ನು ಅಲಂಕರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು. ಗ್ರಾಮದ ಹಿರಿಯರು, ಯುವಕರು ಹಾಗೂ ಸಮಾಜದ ಮುಖಂಡರು ಒಗ್ಗೂಡಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕನಕದಾಸರನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಮುಖಂಡ ಅಮರೇಶ ಕನ್ಯಾಳ, ಕನಕದಾಸರು ಕೇವಲ ಭಕ್ತಿಪಂಥದ ದಾಸಶ್ರೇಷ್ಠರಾಗಿರದೆ, ತಮ್ಮ ಸಾಹಿತ್ಯ ಮತ್ತು ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಮಹಾನ್ ಸಂತರು. ಜಾತಿ, ಮತ, ಮೇಲು-ಕೀಳು ಎಂಬ ಭೇದಭಾವಗಳನ್ನು ಮೀರಿ ಮನುಷ್ಯರೆಲ್ಲರೂ ಸಮಾನರು ಎಂಬ ಮೌಲ್ಯವನ್ನು ತಮ್ಮ ಬದುಕು ಹಾಗೂ ಸಾಹಿತ್ಯದ ಮೂಲಕ ಸಾರಿದ್ದಾರೆ. ಅವರ ಕೀರ್ತನೆಗಳಲ್ಲಿ ಭಕ್ತಿ, ನೈತಿಕತೆ, ಮಾನವೀಯತೆ ಮತ್ತು ಸಾಮಾಜಿಕ ಸಮಾನತೆಯ ಆಶಯಗಳು ಅಡಕವಾಗಿವೆ ಎಂದು ಹೇಳಿದರು.

ಕನಕದಾಸರ ಸಾಹಿತ್ಯ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ವಿಚಾರಧಾರೆಗಳು ಯುವಜನತೆಗೆ ಉತ್ತಮ ಬದುಕು ರೂಪಿಸಿಕೊಳ್ಳಲು ಪ್ರೇರಣೆಯಾಗಿವೆ. ಜಯಂತಿ ಆಚರಣೆಗೆ ಮಾತ್ರ ಸೀಮಿತವಾಗದೆ, ಅವರು ಸಾರಿದ ಸಮಾನತೆ, ಸಹಬಾಳ್ವೆ, ಭಕ್ತಿ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರು, ಯುವಕರು, ಸಮಾಜದ ಮುಖಂಡರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದು, ಕನಕದಾಸರ ಆದರ್ಶಗಳನ್ನು ಸ್ಮರಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಕೊಪ್ಪಳ ಜಿಲ್ಲಾ ವರದಿಗಾರರು

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ